ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಣಿಕೊಪ್ಪಲು: ಮಾಪಣಮಾಡ, ಬದಲೇರ ತಂಡಕ್ಕೆ ಜಯ

ಅರಮಣಮಾಡ ಕೊಡವ ಕೌಟುಂಬಿಕ ಕ್ರಿಕೆಟ್ ಟೂರ್ನಿ :
Published 26 ಏಪ್ರಿಲ್ 2024, 4:14 IST
Last Updated 26 ಏಪ್ರಿಲ್ 2024, 4:14 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಸಮೀಪದ ಬಾಳೆಲೆ ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ ಅರಮಣಮಾಡ ಕೊಡವ ಕೌಟುಂಬಿಕ ಕ್ರಿಕೆಟ್ ಟೂರ್ನಿಯಲ್ಲಿ ಲೋಕಸಭಾ ಚುನಾವಣೆಯ ಕಾರಣ ಗುರುವಾರ ಕೇವಲ 2 ಪಂದ್ಯಗಳು ಮಾತ್ರವೇ  ನಡೆದವು.

ಮಾಪಣಮಾಡ ಮತ್ತು ಚಿಮ್ಮುನಿರ ತಂಡದ ನಡುವೆ ನಡೆದ ಮೊದಲ ಪಂದ್ಯದಲ್ಲಿ ಮಾಪಣಮಾಡ ತಂಡ 47 ರನ್‌ಗಳಿಂದ ಜಯಗಳಿಸಿತು.

ಮೊದಲು ಬ್ಯಾಟ್ ಮಾಡಿದ ಮಾಪಣಮಾಡ ತಂಡ ನಿಗದಿತ 8 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 106 ರನ್ ಗಳಿಸಿತು. ಗೆಲುವಿನ ಗುರಿ ಬೆನ್ನತ್ತಿದ ಚಿಮ್ಮುನ್ನಿರ ತಂಡ ಕೇವಲ 57 ರನ್ ಗಳಿಸಲಷ್ಟೇ ಶಕ್ತವಾಯಿತು. ಉತ್ತಮವಾಗಿ ಆಡಿದ ಚಿಮ್ಮುನ್ನಿರ ತಂಡದ ಕವನ್ ಕಾರ್ಯಪ್ಪ ಪಂದ್ಯ ಪರುಷ ಪ್ರಶಸ್ತಿ ಪಡೆದರು.

2ನೇ ಪಂದ್ಯದಲ್ಲಿ ಬದಲೇರ ತಂಡ ಅಲ್ಲಪಂಡ ತಂಡದ ಎದರು 8 ರನ್‌ಗಳಿಂದ ರೋಚಕ ಗೆಲುವು ದಾಖಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಬದಲೇರ ತಂಡ 3 ವಿಕೆಟ್ ಕಳೆದುಕೊಂಡು 77 ರನ್ ಗಳಿಸಿತು. ಬಳಿಕ ಬ್ಯಾಟಿಂಗ್‌ಗೆ ಇಳಿದ ಅಲ್ಲಪಂಡ ತಂಡ 9 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿ ಕೇವಲ 8 ರನ್‌ಗಳಿಂದ ಗೆಲುವಿನ ಅವಕಾಶ ಕಳೆದುಕೊಂಡಿತು. ಅಲ್ಲಪಂಡ ತಂಡದ ಮಿಲನ್ ಪಂದ್ಯ ಪುರುಷ ಪ್ರಶಸ್ತಿ ಪಡೆದರು.

ಶುಕ್ರವಾರ ಲೋಕಸಭಾ ಚುನಾವಣೆ ನಡೆಯುವುದರಿಂದ ಯಾವುದೇ ಪಂದ್ಯಗಳು ನಡೆಯುವುದಿಲ್ಲ ಎಂದು ಆಯೋಜಕರು ತಿಳಿಸಿದ್ದಾರೆ.

ಬದಲೇರ ತಂಡ
ಬದಲೇರ ತಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT