ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯುತ್ ಬಿಲ್ ಬಾಕಿ ಕೇಳಲು ಹೋದ GESCOM ಸಿಬ್ಬಂದಿಗೆ ಚಪ್ಪಲಿಯಲ್ಲಿ ಹೊಡೆದ ಗ್ರಾಹಕ!

ಕೊಪ್ಪಳ ಜಿಲ್ಲೆ ಮುನಿರಾಬಾದ್ ಸಮೀಪದ ಕೂಕನಪಳ್ಳಿ ಗ್ರಾಮದಲ್ಲಿ ಘಟನೆ
Published : 24 ಮೇ 2023, 6:08 IST
Last Updated : 24 ಮೇ 2023, 6:08 IST
ಫಾಲೋ ಮಾಡಿ
Comments

ಮುನಿರಾಬಾದ್: ವಿದ್ಯುತ್ ಬಿಲ್ ಬಾಕಿ ವಸೂಲಾತಿಗೆ ತೆರಳಿದ್ದ ಜೆಸ್ಕಾಂ ಸಿಬ್ಬಂದಿಗೆ ಗ್ರಾಹಕರೊಬ್ಬರು ಚಪ್ಪಲಿಯಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಮುನಿರಾಬಾದ್ ಸಮೀಪದ ಕೂಕನಪಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಕೂಕನಪಳ್ಳಿ ಗ್ರಾಮದ ಚಂದ್ರಶೇಖರ ಈರಯ್ಯ ಹಿರೇಮಠ ಅವರು ಲೈನ್‌ಮನ್ ಮಂಜುನಾಥ ಅವರ ಮೇಲೆ ಹಲ್ಲೆ ಮಾಡಿದ್ದಾರೆ.

‘ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಕಾರಣ ಚಂದ್ರಶೇಖರ ಅರವ ಮನೆಯ ಗೃಹಬಳಕೆಯ ವಿದ್ಯುತ್ ಸಂಪರ್ಕವನ್ನು ಜೆಸ್ಕಾಂ ಸಿಬ್ಬಂದಿ ಕಡಿತಗೊಳಿಸಿದ್ದರು. ಅನಧಿಕೃತವಾಗಿ ಮತ್ತೆ ಸಂಪರ್ಕ ಪಡೆದುಕೊಂಡಿದ್ದಲ್ಲದೆ, ಕುಪಿತಗೊಂಡು ಸಿಬ್ಬಂದಿಗೆ ದೂರವಾಣಿ ಕರೆ ಮಾಡಿ, ನಾವು ಮನೆಯಲ್ಲಿ ಇಲ್ಲದ ವೇಳೆ ಸಂಪರ್ಕ ಏಕೆ ಕಡಿತಗೊಳಿಸಿದ್ದೀರಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಮನೆಗೆ ಹೋದ ಜೆಸ್ಕಾಂ ಸಿಬ್ಬಂದಿ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿದ್ದಾರೆ’ ಎಂದು ಇಲ್ಲಿನ ಠಾಣೆಗೆ ದೂರು ನೀಡಲಾಗಿದೆ. ಆರೋಪಿ ಚಂದ್ರಶೇಖರ ವಿರುದ್ಧ ಇಲ್ಲಿನ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT