ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಮಂಡಿಸಿದ್ದು ಶಿಕ್ಷಣ ವಿರೋಧಿ ಬಜೆಟ್: ರಮೇಶ ವೀರಾಪುರ

Published 18 ಫೆಬ್ರುವರಿ 2024, 16:25 IST
Last Updated 18 ಫೆಬ್ರುವರಿ 2024, 16:25 IST
ಅಕ್ಷರ ಗಾತ್ರ

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿರುವ 15ನೇ ಬಜೆಟ್ ಶಿಕ್ಷಣ  ವಿರೋಧಿಯಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಕೇವಲ ಶೇ 12 ರಷ್ಟು ಹಣ ಮೀಸಲಿಟ್ಟಿದ್ದು, ಶಿಕ್ಷಣ ವ್ಯವಸ್ಥೆಯ ದೂರದೃಷ್ಟಿ ಹೊಂದಿಲ್ಲ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ವೀರಾಪೂರು ಖಂಡಿಸಿದ್ದಾರೆ.

 ರಾಜ್ಯ ಸರ್ಕಾರ ಕಳೆದ 4 ವರ್ಷಗಳ ಬಜೆಟ್ ನಲ್ಲಿ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ  ಅನುದಾನ ಕಡಿತಗೊಳಿಸುತ್ತಿದೆ. ₹44,422 ಕೋಟಿ  ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಶೇ 12 ಹಣ ಮೀಸಲಿಟ್ಟಿದೆ. 2020-21 ರಲ್ಲಿ ಶೇ 13 , 2021-22 ರಲ್ಲಿ ಶೇ 12.7, 2022-23 ರಲ್ಲಿ ಶೇ 12.9, 2023-24 ರಲ್ಲಿ ಶೇ 11 ಮೀಸಲಿಟ್ಟಿತ್ತು. ಶಿಕ್ಷಣ ಕ್ಷೇತ್ಕ್ಕೆ ಆದ್ಯತೆ ನೀಡಬೇಕಿದ್ದ ಸರ್ಕಾರ ಖಾಸಗಿಯವರ ಸಹಭಾಗಿತ್ವವನ್ನು ನಿರೀಕ್ಷಿಸುತ್ತಿರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ಎಸ್ಎಫ್ಐ ಯಿಂದ  ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯದಲ್ಲಿ ಹೊಸ ಹಾಸ್ಟೆಲ್ ಮಂಜೂರು ಮಾಡಲು ಮನವಿ ಸಲ್ಲಿಸಿದ ಭಾಗವಾಗಿ ಬಜೆಟ್ ನಲ್ಲಿ ಮೊರಾರ್ಜಿ ದೇಸಾಯಿ, ಅಲ್ಪಾಸಂಖ್ಯಾತರ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ ಇಲಾಖೆಯ 345 ವಸತಿನಿಲಯ ಘೋಷಣೆ ಮಾಡಿದ್ದು ಸ್ವಾಗತರ್ಹಾ ಎಂದು ತಿಳಿಸಿದ್ದಾರೆ.

ವಸತಿ ನಿಲಯ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ  ₹3,500ಗೆ ಹೆಚ್ಚಿಸಬೇಕೆಂಬ ಬೇಡಿಕೆಗೆ ಸ್ಪಂದಿಸಿಲ್ಲ’. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಅಲ್ಪಾಸಂಖ್ಯಾತ ಕಲ್ಯಾಣ ಇಲಾಖೆಗಳಡಿ ಇರುವ ವಸತಿನಿಲಯ ವಿದ್ಯಾರ್ಥಿಗಳಿಗೆ ಮಾಸಿಕ ಭೋಜನ ವೆಚ್ಚವನ್ನು ₹1,750 ದಿಂದ ₹1,850 ಅಂದರೆ ಕೇವಲ ₹100 ಹೆಚ್ಚಳ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಪೌಷ್ಠಿಕ ಆಹಾರ ಒದಗಿಸಲು ಅಸಾಧ್ಯ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT