ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಶ್ರೀಕೃಷ್ಣ ಜನ್ಮಾಷ್ಠಮಿ, ಸಾಂಸ್ಕೃತಿಕ ಕಾರ್ಯಕ್ರಮ

Published 27 ಆಗಸ್ಟ್ 2023, 5:43 IST
Last Updated 27 ಆಗಸ್ಟ್ 2023, 5:43 IST
ಅಕ್ಷರ ಗಾತ್ರ

ರಾಯಚೂರು: ಶ್ರೀಕೃಷ್ಣ ಜನ್ಮಾಷ್ಠಮಿಯ ಅಂಗವಾಗಿ ನಗರದ ಇಸ್ಕಾನ್ ಮಂದಿರದಲ್ಲಿ ಸೆಪ್ಟೆಂಬರ್ 7ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಇಸ್ಕಾನ್ ಮಂದಿರದ ಪ್ರಧಾನ ವ್ಯವಸ್ಥಾಪಕ ಸಾರಥಿ ಶ್ಯಾಮದಾಸ ತಿಳಿಸಿದರು.‌‌

ಶ್ರೀಕೃಷ್ಣ ಜನ್ಮಾಷ್ಠಮಿ ಹಿಂದೂಗಳ ದೊಡ್ಡ ಹಬ್ಬವಾಗಿದೆ. ಇಸ್ಕಾನ್ ಭಕ್ತರು ಸೆಪ್ಟೆಂಬರ್ 7ರಂದು ಬೆಳಿಗ್ಗೆ 4.30ರಿಂದ ಮಧ್ಯರಾತ್ರಿ 12ರ ವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. 15 ಸಾವಿರ ಭಕ್ತರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಶನಿವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಕೃಷ್ಣಜನ್ಮಾಷ್ಠಮಿಯ ಅಂಗವಾಗಿ ಮಕ್ಕಳಿಗೆ ವೈದಿಕ ವೇಷಭೂಷಣ ಸ್ಪರ್ಧೆ, ಭಾವಪರವಶ ಕೀರ್ತನೆ, ಭಗವದ್ಗೀತೆ ಶ್ಲೋಕಗಳ ಪಠಣ, ಉಯ್ಯಾಲೆ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ 30 ಶಾಲೆಗಳ 1,500 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ತೆಪ್ಪೋತ್ಸವ, ಪಲ್ಲಕ್ಕಿ ಸೇವೆ, ಮಹಾ ಅಭಿಷೇಕ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದರು.

ಶ್ರೀಮದ್ ಭಾಗವತ ಸಪ್ತಾಹ ಪ್ರಯುಕ್ತ ಆಗಸ್ಟ್ 30ರಿಂದ ಸೆಪ್ಟೆಂಬರ್ 5ರವರೆಗೆ ನಿತ್ಯ ಸಂಜೆ 4ರಿಂದ ಸಂಜೆ 7ರವರೆಗೆ ಕೃಷ್ಣ ಕಥಾ ನಡೆಯಲಿದೆ. ಆಗಸ್ಟ್ 31ರಂದು ಬಲರಾಮ ಜಯಂತಿ ಆಚರಿಸಲಾಗುವುದು. ರಾಯಚೂರಿನ ಜನತೆ ಶ್ರೀ ಕೃಷ್ಣ ಜನ್ಮಾಷ್ಠಮಿಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಅಭಿಷೇಕ್, ಶ್ರೀನಿವಾಸ, ಭೀಮೇಶ, ಚೈತನ್ಯ ರಾಜಶೇಖರ ದಾಸ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT