ಹಾರೋಹಳ್ಳಿ: ಮರಳವಾಡಿ ಹಾಗೂ ಯಲಚವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅವರು ವಿವಿಧ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸರ್ಕಾರ ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದಲೇ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದು ಜನರಿಗೆ ತಲುಪಿಸುವ ಕೆಲಸ ಮಾಡಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿ ಮಾದರಿ ಕ್ಷೇತ್ರವಾಗಿ ಮಾಡಲಾಗುವುದು ಎಂದು ಹೇಳಿದರು.
ಯಲಚವಾಡಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಿದರು.
ಮುಖಂಡರಾದ ಕೀರಣಗೆರೆ ಜಗದೀಶ್, ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ಜೆಸಿಬಿ ಅಶೋಕ್, ಈಶ್ವರ್, ಸಾಬ್ದರ್ ಹುಸೇನ್ ಸೇರಿದಂತೆ ಇನ್ನಿತರರು ಹಾಜರಿದ್ದರು.