ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ | ಲೋಕಸಭಾ ಚುನಾವಣೆ: ಎಎಪಿ ಅಭ್ಯರ್ಥಿಗಳ ಪರ ಸುನಿತಾ ಕೇಜ್ರಿವಾಲ್ ಪ್ರಚಾರ

Published 1 ಮೇ 2024, 9:30 IST
Last Updated 1 ಮೇ 2024, 9:30 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತ್‌ನಲ್ಲಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿದಿರುವ ಆಮ್‌ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಗಳ ಪರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪತ್ನಿ ಸುನಿತಾ ಅವರು ನಾಳೆ (ಮೇ 2ರಂದು) ಪ್ರಚಾರ ನಡೆಸಲಿದ್ದಾರೆ.

'ಸುನಿತಾ ಕೇಜ್ರಿವಾಲ್‌ ಅವರು ಭರೂಚ್‌ ಹಾಗೂ ಭಾವನಗರ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಎಎಪಿ ಅಭ್ಯರ್ಥಿಗಳ ಪರ ಗುರುವಾರ ರೋಡ್‌ ಶೋ ನಡೆಸಲಿದ್ದಾರೆ' ಎಂದು ಎಎಪಿ ಬುಧವಾರ ಹೇಳಿದೆ.

ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಸದ್ಯ ಅವರು ತಿಹಾರ್‌ ಜೈಲಿನಲ್ಲಿದ್ದಾರೆ.

ಅರವಿಂದ ಕೇಜ್ರಿವಾಲ್‌ ಅನುಪಸ್ಥಿತಿಯಲ್ಲಿ ಸುನಿತಾ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ. ಇತ್ತೀಚೆಗೆ ಅವರು, ದೆಹಲಿ ಪೂರ್ವ ಹಾಗೂ ದೆಹಲಿ ಪಶ್ಚಿಮ ಲೋಕಸಭಾ ಕ್ಷೇತ್ರಗಳಲ್ಲಿ ಎಎಪಿ ಅಭ್ಯರ್ಥಿಗಳ ಪರ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಪಂಜಾಬ್‌ ಹಾಗೂ ಹರಿಯಾಣದಲ್ಲಿಯೂ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆಗೆ ದಿನಾಂಕ ನಿಗದಿಯಾಗಿವೆ.

ಕಾಂಗ್ರೆಸ್–ಎಎಪಿ ಸೀಟು ಹಂಚಿಕೆ
ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದ ಭಾಗವಾಗಿರುವ ಕಾಂಗ್ರೆಸ್‌ ಹಾಗೂ ಎಎಪಿ, 26 ಲೋಕಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಸೀಟು ಹಂಚಿಕೆ ಮಾಡಿಕೊಂಡಿವೆ. 24ರಲ್ಲಿ ಕಾಂಗ್ರೆಸ್‌ ಹಾಗೂ 2 ಕಡೆ ಎಎಪಿ ಸ್ಪರ್ಧಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT