ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ಐದನೇ ಹಂತ: ನಾಮಪತ್ರ ಸಲ್ಲಿಕೆ ಆರಂಭ

Published 26 ಏಪ್ರಿಲ್ 2024, 15:23 IST
Last Updated 26 ಏಪ್ರಿಲ್ 2024, 15:23 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನಕ್ಕೆ (ಮೇ 20) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು (ಏ.26) ಆರಂಭಗೊಂಡಿತು. 

ಎಂಟು ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನ 49 ಕ್ಷೇತ್ರಗಳಿಗೆ ಅಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ. ಈ ಕುರಿತು ಅಧಿಸೂಚನೆಯನ್ನೂ ಹೊರಡಿಸಿದೆ.

ಐದನೇ ಹಂತದಲ್ಲಿ ಬಿಹಾರ, ಜಾರ್ಖಂಡ್‌, ಮಹಾರಾಷ್ಟ್ರ, ಒಡಿಶಾ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದರು.

ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ. ಮೇ 4ರಂದು ಪರಿಶೀಲನೆ ನಡೆಯಲಿದೆ ಮತ್ತು ನಾಮಪತ್ರ ಹಿಂಪಡೆಯಲು ಮೇ 6 ಕೊನೆಯ ದಿನಾಂಕವಾಗಿದೆ ಎಂದು ವಿವರಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT