ಶಿವಮೊಗ್ಗ/ರಾಯಚೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಇಂದು (ಮೇ 2ರಂದು) ರಾಜ್ಯಕ್ಕೆ ಆಗಮಿಸಲಿದ್ದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ರಾಹುಲ್ ಗಾಂಧಿ ಮೇ 2ರಂದು ಮಧ್ಯಾಹ್ನ 12ಕ್ಕೆ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆ ನಡೆದಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
‘ರಾಹುಲ್ ಗಾಂಧಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾರ್ಯದರ್ಶಿ ಮಯೂರ್ ಜಯಕುಮಾರ್ ಭಾಗವಹಿಸಲಿದ್ದಾರೆ ಎಂದರು.