ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Dwarakish Death: ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

Published 16 ಏಪ್ರಿಲ್ 2024, 6:30 IST
Last Updated 16 ಏಪ್ರಿಲ್ 2024, 6:30 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಮಂಗಳವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. 

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸ್ವಗೃಹದಲ್ಲಿ ಮಂಗಳವಾರ ಬೆಳಿಗ್ಗೆ ನಿಧನರಾದರು.

ಚಿತ್ರ ನಿರ್ಮಾಣ, ನಿರ್ದೇಶನದಲ್ಲೂ ಹೆಸರು ಮಾಡಿದ್ದ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದರು. ಹಾಗೂ ಚಂದನವನದಲ್ಲಿ ಹಲವು ದಿಗ್ಗಜ ನಟರೊಂದಿಗೆ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು.

ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ದ್ವಾರಕೀಶ್‌ ನೂರಾರು ಸಿನಿಮಾಗಳಲ್ಲಿ ನಟಿಸಿದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್–ವಿಷ್ಣು ಹಲವಾರು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದರು. ಇವರು ಅಭಿನಯದ ಸಿನಿಮಾಗಳು ಸೂಪರ್‌ ಹಿಟ್‌ ಆಗಿದ್ದವು 

ರಾಜ್‌ಕುಮಾರ್, ವಿಷ್ಣುವರ್ಧನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಹೊಂದಿದ್ದ ಅವರು 'ದ್ವಾರಕೀಶ್ ಚಿತ್ರ' ನಿರ್ಮಾಣ ಸಂಸ್ಥೆ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಾಣ ಮಾಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT