ಕೋಲಾರ: 'ಜೆಡಿಎಸ್ ನ 19 ಶಾಸಕರ ಭವಿಷ್ಯ ಬೇಕೋ? ತಮ್ಮ ಕುಟುಂಬದ ರೇವಣ್ಣ ಹಾಗೂ ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ' ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಆಗ್ರಹಿಸಿದ್ದಾರೆ.

ಈ ಸಂಬಂಧ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, 'ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂಥ ಕೆಲಸ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕು' ಎಂದು ಒತ್ತಾಯಿಸಿದ್ದಾರೆ.
.ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಲಿ: ಹೆಬ್ಬಾಳಕರ.
'ಇತ್ತೀಚಿನ ದಿನಗಳಲ್ಲಿ 'ಹಾಸನದ ಲೀಲೆಗಳು' ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಹೊರಗಡೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಎನಿಸುವಂಥ ಸ್ಥಿತಿಗೆ ತಲುಪಿದೆ' ಎಂದಿದ್ದಾರೆ.

'ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿ ಶಾಸಕನಾಗಿರುವ ನನಗೆ ಬಂದಿದೆ. ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿ ಯೋಚಿಸಿ' ಎಂದು ಪ್ರಶ್ನಿಸಿದ್ದಾರೆ.
.ಅಶ್ಲೀಲ ವಿಡಿಯೊ ಪ್ರಕರಣ: ಪ್ರಜ್ವಲ್ ರೇವಣ್ಣ ಅಮಾನತಿಗೆ ಜೆಡಿಎಸ್ ಶಾಸಕ ಆಗ್ರಹ.
'ಪಕ್ಷದ ವರಿಷ್ಠ, ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯ ಅಧ್ಯಕ್ಷ ಎಚ್.ಡಿ.ಕುಮಾರಣ್ಣ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯ ಇದಾಗಿದೆ' ಎಂದು ಹೇಳಿದ್ದಾರೆ.

'ಆರೋಪ ಸ್ಥಾನದಲ್ಲಿರುವ ರೇವಣ್ಣ ಮತ್ತು ಪ್ರಜ್ವಲ್ ಅವರನ್ನು 24ಗಂಟೆಗಳಲ್ಲಿ ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಸಿದ್ಧಾಂತಗಳನ್ನು ಉಳಿಸಿ ಕಾರ್ಯಕರ್ತರನ್ನು, ನಮ್ಮನ್ನು ಮುಜುಗರದಿಂದ ಪಾರು ಮಾಡಿ' ಎಂದು ಕೋರಿದ್ದಾರೆ.
.ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ತನಿಖೆಯನ್ನು ಸ್ವಾಗತಿಸುವೆ: ಜಿ.ಟಿ. ದೇವೇಗೌಡ.
'ತಮ್ಮ ತೀರ್ಮಾನದ ಮೇಲೆ ಪಕ್ಷದ ಮುಂದಿನ ಭವಿಷ್ಯವಿದೆಯೆಂಬುದು ಮತ್ತೊಮ್ಮೆ ತಿಳಿಸಲು ಬಯಸುತ್ತೇನೆ' ಎಂದು ಗರಂ ಆಗಿದ್ದಾರೆ.
.ಆಳ-ಅಗಲ | ಬೀದಿ ಬೀದಿಯಲ್ಲಿ ಪೆನ್ಡ್ರೈವ್; ಹೆಣ್ಣಿನ ಮಾನವೂ ಬೀದಿಗೆ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.