ಬೆಂಗಳೂರು

ಆಮೆ ಮಾರಾಟ ಆರೋಪ: ವ್ಯಕ್ತಿ ಬಂಧನ

ಆಮೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಲಾರೆನ್ಸ್ ಕ್ಸೇವಿಯರ್ (26) ಎಂಬಾತನನ್ನು ಬಂಧಿಸಿರುವ ಸಿಐಡಿ ಅರಣ್ಯ ಘಟಕದ ಪೊಲೀಸರು 50 ಆಮೆಗಳನ್ನು ವಶಪಡಿಸಿ ಕೊಂಡಿದ್ದಾರೆ.

ಬೆಂಗಳೂರು: ಆಮೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಲಾರೆನ್ಸ್ ಕ್ಸೇವಿಯರ್ (26) ಎಂಬಾತನನ್ನು ಬಂಧಿಸಿರುವ ಸಿಐಡಿ ಅರಣ್ಯ ಘಟಕದ ಪೊಲೀಸರು 50 ಆಮೆಗಳನ್ನು ವಶಪಡಿಸಿ ಕೊಂಡಿದ್ದಾರೆ.

ಎಚ್‌ಬಿಆರ್ ಲೇಔಟ್ ನಿವಾಸಿಯಾದ ಲಾರೆನ್ಸ್, ಕೆಂಗೇರಿ ಬಸ್ ನಿಲ್ದಾಣದ ಬಳಿ ಅಕ್ವೇರಿಯಂ ಮಾರಾಟ ಮಳಿಗೆ ಇಟ್ಟುಕೊಂಡಿದ್ದ. ಆ ಮಳಿಗೆಯಲ್ಲಿ ಆತ ಆಮೆಗಳನ್ನು ಮಾರುತ್ತಿದ್ದ. ಈ ಬಗ್ಗೆ ಮಾಹಿತಿ ಕಲೆ ಹಾಕಿ ಮಳಿಗೆಯ ಮೇಲೆ ಬುಧವಾರ ಸಂಜೆ ದಾಳಿ ನಡೆಸಿ ಆತನನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಲಾರೆನ್ಸ್, ಚೆನ್ನೈನಿಂದ ಆಮೆಗಳನ್ನು ತರಿಸಿದ್ದ. ಆತನ ವಿರುದ್ಧ ಕೆಂಗೇರಿ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿ ಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಎಸ್‌ಐ ಅನಂತಯ್ಯ ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ.

Comments