ನವದೆಹಲಿ

ರೋಹಿಣಿ ದೆಹಲಿ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ

ದೆಹಲಿ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೊರ್ಲ(ಜಿ) ರೋಹಿಣಿ ಅವರು ಸೋಮವಾರ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದರು.

ನವದೆಹಲಿ (ಪಿಟಿಐ): ದೆಹಲಿ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೊರ್ಲ(ಜಿ) ರೋಹಿಣಿ ಅವರು ಸೋಮವಾರ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದರು.

ದೆಹಲಿ ರಾಜ್ಯಪಾಲರಾದ ನಜೀಬ್‌ ಜಂಗ್‌ ಅವರು ಗೌಪತ್ಯೆಯ ಪ್ರಮಾಣ ವಚನ ಬೋಧಿಸಿದರು. ದೆಹಲಿ ಹೈಕೋರ್ಟ್‌ನಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಮುಖ್ಯ ನ್ಯಾಯಮೂರ್ತಿ ನೇಮಕಗೊಂಡಿದ್ದಾರೆ.

ರೋಹಿಣಿ ಅವರು ಮೂಲತಹ ಆಂಧ್ರಪ್ರದೇಶದ ವಿಶಾಖಪಟ್ಟಣದವರು. ಸುಪ್ರೀಂ ಕೋರ್ಟ್‌ ಸೇರಿದಂತೆ ಹಲವು ಹೈಕೋರ್ಟ್‌ಗಳಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

Comments