ಪೂರ್ವ ಕರಾವಳಿಯಲ್ಲಿ ಮಳೆಯ ಅಬ್ಬರ

ಪುದುಚೆರಿಯಲ್ಲಿ ಭಾರಿ ಮಳೆ

ಪೂರ್ವ ಕರಾವಳಿ ಭಾಗದಲ್ಲಿ ಇನ್ನೂ ಮಳೆಯ ಅಬ್ಬರ ತಗ್ಗಿಲ್ಲ. ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಭಾರಿ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಪುದುಚೆರಿ (ಪಿಟಿಐ): ಪೂರ್ವ ಕರಾವಳಿ ಭಾಗದಲ್ಲಿ ಇನ್ನೂ ಮಳೆಯ ಅಬ್ಬರ ತಗ್ಗಿಲ್ಲ. ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಭಾರಿ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಶುಕ್ರವಾರ ರಾತ್ರಿಯಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಪುದುಚೆರಿಯಲ್ಲಿ 9.1 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದೊಂದು ವಾರದಿಂದ ಪುದುಚೆರಿಯಲ್ಲಿ ಸುರಿಯುತ್ತಿರುವ ಮಳೆ 60 ಸೆಂ.ಮೀ ದಾಟಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರ ಕೂಡಲೇ ₹ 200 ಕೋಟಿ ಪರಿಹಾರ ಹಣ ಬಿಡುಗಡೆ ಮಾಡಬೇಕೆಂದು ಪುದುಚೆರಿ ಮುಖ್ಯಮಂತ್ರಿ ಎನ್‌.ರಂಗಸ್ವಾಮಿ ಮನವಿ ಮಾಡಿದ್ದಾರೆ.

ಚೆನ್ನೈನಲ್ಲಿ ಮತ್ತೆ ಮಳೆ: ಪ್ರವಾಹದ ಅಬ್ಬರ ಕಡಿಮೆಯಾಗಿರುವ ಚೆನ್ನೈನಲ್ಲಿ ಮತ್ತೆ ಮಳೆಯಾಗುತ್ತಿದೆ. ಶನಿವಾರ ಬೆಳಿಗ್ಗೆಯಿಂದ ಚೆನ್ನೈ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆ ಸುರಿಯುತ್ತಿದೆ.

Comments