ಪಟ್ನಾ

ನಿತೀಶ್‌ ಭೇಟಿ ಮಾಡಿದ ಬಿಲ್‌ ಗೇಟ್ಸ್

ಮೈಕ್ರೊಸಾಫ್ಟ್‌ನ ಸಂಸ್ಥಾಪಕ ಹಾಗೂ ವಿಶ್ವದ ಶ್ರೀಮಂತರಲ್ಲೊಬ್ಬರಾದ ಬಿಲ್‌ ಗೇಟ್ಸ್ ಅವರು ಶನಿವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಆರೋಗ್ಯ, ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಅವರು ಹೇಳಿದ್ದಾರೆ.

ಪಟ್ನಾ(ಐಎಎನ್‌ಎಸ್): ಮೈಕ್ರೊಸಾಫ್ಟ್‌ನ ಸಂಸ್ಥಾಪಕ ಹಾಗೂ ವಿಶ್ವದ ಶ್ರೀಮಂತರಲ್ಲೊಬ್ಬರಾದ ಬಿಲ್‌ ಗೇಟ್ಸ್ ಅವರು ಶನಿವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಆರೋಗ್ಯ, ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಅವರು ಹೇಳಿದ್ದಾರೆ.

‘ಬಿಲ್‌ ಗೇಟ್ಸ್ ಅವರು ನಿತೀಶ್ ಕುಮಾರ್ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದು, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಬಿಹಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಅವರು ನೆರವು ನೀಡಬಹುದು’ ಎಂದು ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

’ಬಿಲ್‌ ಗೇಟ್ಸ್ ಅವರು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳುವ ಆರೋಗ್ಯ, ಶಿಕ್ಷಣ ಸೇರಿದಂತೆ ಇತರ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

Comments