ಐಎಸ್‌ಐ ನಂಟು ಒಬ್ಬನ ಬಂಧನ

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಗೂಢಚರ್ಯೆ ನಡೆಸುತ್ತಿದ್ದ ಮತ್ತೊಬ್ಬನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಜಮ್ಮು– ಕಾಶ್ಮೀರದ ಸರ್ಕಾರಿ ಶಾಲೆಯ ಶಿಕ್ಷಕ ಸಬರ್‌ ಬಂಧಿತ ಆರೋಪಿ.

ನವದೆಹಲಿ(ಐಎಎನ್‌ಎಸ್‌): ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಗೂಢಚರ್ಯೆ ನಡೆಸುತ್ತಿದ್ದ ಮತ್ತೊಬ್ಬನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಜಮ್ಮು– ಕಾಶ್ಮೀರದ ಸರ್ಕಾರಿ ಶಾಲೆಯ ಶಿಕ್ಷಕ ಸಬರ್‌ ಬಂಧಿತ ಆರೋಪಿ. ರಜೋರಿ ಜಿಲ್ಲೆಯಲ್ಲಿ ಶುಕ್ರವಾರ ಸಬರ್‌ನನ್ನು ಬಂಧಿಸಲಾಗಿದೆ ಎಂದು ದೆಹಲಿಯ ಅಪರಾಧ ವಿಭಾಗದ ಜಂಟಿ ಪೊಲೀಸ್‌ ಕಮಿಷನರ್‌ ರವೀಂದ್ರ ಯಾದವ್‌ ತಿಳಿಸಿದ್ದಾರೆ.

Comments