ನವದೆಹಲಿ

"ಅಂಬೇಡ್ಕರ್‌ ಕನಸನ್ನು ನನಸು ಮಾಡಲು ಸರ್ಕಾರ ಬದ್ಧ"

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಕನಸುಗಳನ್ನು ನನಸು ಮಾಡಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ತಿಳಿಸಿದರು.

ನವದೆಹಲಿ (ಪಿಟಿಐ): ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಕನಸುಗಳನ್ನು ನನಸು ಮಾಡಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ತಿಳಿಸಿದರು.

ಅಂಬೇಡ್ಕರ್‌ ಅವರ 60ನೇ ಪರಿನಿರ್ವಾಣ ದಿನದ ಅಂಗವಾಗಿ ಸಂಸತ್‌ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೋದಿ  ಮಾತನಾಡಿದರು.

ಬಾಬಾ ಸಾಹೇಬ್‌ ಅಂಬೇಡ್ಕರ್‌  ‘ಆರ್ಥಿಕ ಪ್ರಗತಿ ಮತ್ತು  ಸಮಾನ ಭಾರತ’ ದ ಕನಸು ಕಂಡಿದ್ದರು. ಅವರ ಕನಸನ್ನು ನಮ್ಮ ಸರ್ಕಾರ ನನಸು ಮಾಡಲಿದೆ ಎಂದು ನರೇಂದ್ರ ಮೋದಿ ತಿಳಿಸಿದರು.

ಅಂಬೇಡ್ಕರ್‌ ಸ್ಮರಣಾರ್ಥ 10 ರೂಪಾಯಿ ಹಾಗೂ 125 ರೂಪಾಯಿ ನಾಣ್ಯಗಳನ್ನು ಬಿಡುಗಡೆ ಮಾಡಿದರು.
ನಾವು ಅಂಬೇಡ್ಕರ್‌ ಅವರ ಸಾಮಾಜಿಕ ನ್ಯಾಯ ಪರಿಕಲ್ಪನೆ ಮತ್ತು ಸಂವಿಧಾನವನ್ನು ಅಳವಡಿಸಿಕೊಂಡಿದ್ದೇವೆ. ಆದರೆ ಅವರ ಆರ್ಥಿಕ ಚಿಂತನೆಗಳ ಕಡೆ ನಾವು ಗಮನ ಹರಿಸಿಲ್ಲ ಎಂದರು.

ಮುಂದಿನ ದಿನಗಳಲ್ಲಿ ಅವರ ಆರ್ಥಿಕ ಚಿಂತನೆಗಳನ್ನು ಸರ್ಕಾರ ಅಳವಡಿಸಿಕೊಳ್ಳಲಿದೆ ಎಂದು ಮೋದಿ ತಿಳಿಸಿದರು.

Comments