ಶ್ರೀನಗರ

ಶ್ರೀನಗರ: ಸಿಆರ್‌ಪಿಎಫ್‌ ಬಸ್ಸಿನ ಮೇಲೆ ಉಗ್ರರ ದಾಳಿ

ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಶ್ರೀನಗರ–ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಉಗ್ರರು ನಡೆಸಿದ ಗ್ರೆನೇಡ್‌ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್‌ ಪಡೆಗೆ (ಸಿಆರ್‌ಪಿಎಫ್‌) ಸೇರಿದ 6 ಮಂದಿ ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.

ಶ್ರೀನಗರ (ಪಿಟಿಐ):  ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಶ್ರೀನಗರ–ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಉಗ್ರರು ನಡೆಸಿದ ಗ್ರೆನೇಡ್‌ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್‌ ಪಡೆಗೆ (ಸಿಆರ್‌ಪಿಎಫ್‌) ಸೇರಿದ 6 ಮಂದಿ ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.

ಉಗ್ರರು ಸಂಸ್ಥಾನ್‌ ಸಮೀಪದ ಗ್ರೀನ್‌ ಟನಲ್‌ ಬಳಿ  ಸಿಆರ್‌ಪಿಎಫ್‌ ಬಸ್ಸನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಿದರು.
ಗಾಯಗೊಂಡ ಯೋಧರನ್ನು ಅನಂತ್‌ನಾಗ್‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ವಿರುದ್ಧ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸಿಆರ್‌ಪಿಎಫ್‌ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Comments