ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ

ಸೋನಿಯಾ, ರಾಹುಲ್‌ ಮೇಲ್ಮನವಿ ವಜಾ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳಹಂತದ ನ್ಯಾಯಾಲಯ ನೀಡಿದ್ದ ಸಮನ್ಸ್‌ ರದ್ದುಗೊಳಿಸುವಂತೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ.

ನವದೆಹಲಿ (ಪಿಟಿಐ): ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳಹಂತದ ನ್ಯಾಯಾಲಯ ನೀಡಿದ್ದ ಸಮನ್ಸ್‌ ರದ್ದುಗೊಳಿಸುವಂತೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ.

ನ್ಯಾಯಮೂರ್ತಿ ಸುನಿಲ್‌ ಗೌರ್‌ ಅವರಿದ್ದ ನ್ಯಾಯಪೀಠ ಮೇಲ್ಮನವಿಯನ್ನು ವಜಾಗೊಳಿಸಿದೆ. ಇದಲ್ಲದೆ ಸಮನ್ಸ್‌ಗೆ ತಡೆ ನೀಡಿ 2014ರ ಆಗಸ್ಟ್‌ 6ರಂದು ನೀಡಿದ್ದ ಮಧ್ಯಂತರ ಆದೇಶವನ್ನು ಮುಂದುವರಿಸುವಂತೆ ಮಾಡಿದ್ದ ಮನವಿಯನ್ನೂ ನ್ಯಾಯಪೀಠ ತಳ್ಳಿಹಾಕಿದೆ.

ಡಿಸೆಂಬರ್‌ 8ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಕೆಳಹಂತದ ನ್ಯಾಯಾಲಯ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು.

ಮೇಲ್ಮನವಿ ಅರ್ಜಿ ವಜಾಗೊಂಡಿರುವುದರಿಂದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರು ಕೆಳಹಂತದ ನ್ಯಾಯಾಲಯಕ್ಕೆ ನಾಳೆ (ಮಂಗಳವಾರ) ಖುದ್ದು ವಿಚಾರಣೆಗೆ ಹಾಜರಾಗಬೇಕಾಗಿದೆ.

Comments