ನವದೆಹಲಿ

ನ್ಯಾಯಾಲಯದ ಭಾಷೆ ಇಂಗ್ಲಿಷ್: ಸುಪ್ರೀಂ ಸ್ಪಷ್ಟನೆ

ನ್ಯಾಯಾಲಯದ ಭಾಷೆ ಇಂಗ್ಲಿಷ್... ದೇಶದ ಸರ್ವೋಚ್ಛ ನ್ಯಾಯಾಲಯದ ಸ್ಪಷ್ಟ ನುಡಿ ಇದು. ನ್ಯಾಯಾಲಯದ ತೀರ್ಪುಗಳನ್ನು ಹಿಂದಿ ಹಾಗೂ ಪ್ರಾದೇಶಿಕ ಭಾಷೆಗಳಲ್ಲಿ ಒದಗಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಜಾಗೊಳಿಸಿದ ಸುಪ್ರೀಂ ಕೋರ್ಟ್, ಹೀಗೆ ಖಡಾಖಂಡಿತವಾಗಿ ಹೇಳಿದೆ.

ನವದೆಹಲಿ(ಪಿಟಿಐ): ನ್ಯಾಯಾಲಯದ ಭಾಷೆ ಇಂಗ್ಲಿಷ್... ದೇಶದ ಸರ್ವೋಚ್ಛ ನ್ಯಾಯಾಲಯದ ಸ್ಪಷ್ಟ ನುಡಿ ಇದು.

ನ್ಯಾಯಾಲಯದ ತೀರ್ಪುಗಳನ್ನು ಹಿಂದಿ ಹಾಗೂ ಪ್ರಾದೇಶಿಕ ಭಾಷೆಗಳಲ್ಲಿ ಒದಗಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಜಾಗೊಳಿಸಿದ ಸುಪ್ರೀಂ ಕೋರ್ಟ್, ಹೀಗೆ ಖಡಾಖಂಡಿತವಾಗಿ ಹೇಳಿದೆ.

‌‘ನ್ಯಾಯಾಲಯದ ಭಾಷೆ ಇಂಗ್ಲಿಷ್ ಆಗಿದ್ದು, ನಾವು ಅಂಥ ನಿರ್ದೇಶನ ನೀಡಲು ಸಾಧ್ಯವಿಲ್ಲ’ ಎಂದು ಮುಖ್ಯನ್ಯಾಯಮೂರ್ತಿ ಟಿ.ಎಸ್.ಠಾಕೂರ್ ನೇತೃತ್ವದ ಪೀಠ ಹೇಳಿತು. ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ ಹಾಗೂ ಆರ್.ಬಾನುಮತಿ ಅವರೂ ಪೀಠದಲ್ಲಿದ್ದರು.

ಹಿಂದಿಯನ್ನು ಸುಪ್ರೀಂ ಕೋರ್ಟಿನ ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಸಂವಿಧಾನದ ತಿದ್ದುಪಡಿಗೆ ಸೂಚಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿತ್ತು.

Comments