ಇದು ಬಿಜೆಪಿ ಕಾರ್ಯತಂತ್ರ; ರಾಜಕೀಯ ವೈಷಮ್ಯ –ರಾಹುಲ್‌

‘ನಾ ಇಂಧಿರಾ ಗಾಂಧಿ ಸೊಸೆ, ಯಾರಿಗೂ ಹೆದರಲ್ಲ; ಸೋನಿಯಾ

‘ನಾನು ಇಂಧಿರಾ ಗಾಂಧಿ ಸೊಸೆ. ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ’ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ನವದೆಹಲಿ (ಪಿಟಿಐ): ‘ನಾನು ಇಂಧಿರಾ ಗಾಂಧಿ ಸೊಸೆ. ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ’ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌  ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.19ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ  ದೆಹಲಿ ಕೋರ್ಟ್‌ ಮಂಗಳವಾರ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರಿಗೆ ಸೂಚಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಅವರನ್ನು ಪ್ರಶ್ನಿಸಿದಾಗ, ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ನನ್ನ ನೆಮ್ಮದಿಯೇನೂ ಕೆಡಿಸಿಲ್ಲ, ಈ ವಿಚಾರವಾಗಿ ಯಾರಿಗೂ ಹೆದರುವ ಪ್ರಶ್ನೆ ಇಲ್ಲ. ನಾನು ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಸೊಸೆ’ ಎಂದು ಅವರು ಪ್ರತಿಕ್ರಿಯಿಸಿದರು.

ರಾಜಕೀಯ ವೈಷಮ್ಯ
ಕೂಡಲ್ಲೂರು/ತಮಿಳುನಾಡು (ಪಿಟಿಐ): ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ  ಬಿಜೆಪಿಯ ರಾಜಕೀಯ ವೈಷಮ್ಯದ ಪ್ರತೀಕ. ಇದು ಅವರ ಕಾರ್ಯವೈಖರಿಗೆ ಉದಾಹರಣೆ ಎಂದು ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

ಕೇಂದ್ರದಲ್ಲಿ ತಮ್ಮ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸಲು ಬಿಜೆಪಿ ಇಂತಹ  ಕ್ರಮಗಳನ್ನು ಅನುಸರಿಸುತ್ತಿದೆ. ಇದು ಅವರ ಕಾರ್ಯತಂತ್ರ. ಆದರೆ, ಇದು ಹೆಚ್ಚು ದಿನ ನಡೆಯುವುದಿಲ್ಲ. ನಾನು ಪ್ರಶ್ನೆ ಕೇಳುವುದನ್ನು ಮುಂದುವರಿಸುತ್ತೇನೆ. ಕೇಂದ್ರದ ಮೇಲೆ ಒತ್ತಡ ಹೇರುತ್ತೇನೆ’ ಎಂದು ರಾಹುಲ್‌ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Comments