ಕೋಲ್ಕತ್ತ

ಪಾರ್ಕ್‌ ಸ್ಟ್ರೀಟ್‌ ಅತ್ಯಾಚಾರ: ಅಪರಾಧಿಗಳಿಗೆ 10 ವರ್ಷ ಜೈಲು

ಇಲ್ಲಿನ ಪಾರ್ಕ್‌ ಸ್ಟ್ರೀಟ್‌ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿದಂತೆ ಮೂವರು ಅಪರಾಧಿಗಳಿಗೆ ನ್ಯಾಯಾಲಯ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಕೋಲ್ಕತ್ತ (ಪಿಟಿಐ): ಇಲ್ಲಿನ ಪಾರ್ಕ್‌ ಸ್ಟ್ರೀಟ್‌ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿದಂತೆ ಮೂವರು ಅಪರಾಧಿಗಳಿಗೆ ನ್ಯಾಯಾಲಯ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ  ಚಿರಂಜೀವಿ ಭಟ್ಟಚಾರ್ಯ ಅವರು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣವನ್ನು ಶುಕ್ರವಾರ ಪ್ರಕಟಿಸಿದರು.  ರುಮಾ ಖಾನ್‌, ನಾಸೀರ್‌ ಖಾನ್‌, ಸುಮಿತ್‌ ಬಜಾಜ್‌ ಅವರಿಗೆ ತಲಾ 1 ಲಕ್ಷ ರೂಪಾಯಿ ದಂಡ ಹಾಗೂ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ಥೆ  ಸಜ್ಜೆಟ್ಟಾ ಜೊರ್ಡಾನ್‌ ಅವರು ಕಳೆದ ಮಾರ್ಚ್‌ ತಿಂಗಳಲ್ಲಿ ನಿಧನರಾಗಿದ್ದಾರೆ.

Comments