ಗುವಾಹಟಿ

ಪ್ರಧಾನಿ ಕಚೇರಿ ಕೈವಾಡ: ರಾಹುಲ್

ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹಿಂದೆ ಪ್ರಧಾನಿ ಕಾರ್ಯಾಲಯದ ಕೈವಾಡವಿದೆ ಎಂಬ ಆರೋಪವನ್ನು ಪುನರುಚ್ಚರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಈ ಸಮಸ್ಯೆಯನ್ನು ಕಾನೂನಿನ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಗುವಾಹಟಿ (ಪಿಟಿಐ): ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹಿಂದೆ ಪ್ರಧಾನಿ ಕಾರ್ಯಾಲಯದ ಕೈವಾಡವಿದೆ ಎಂಬ ಆರೋಪವನ್ನು ಪುನರುಚ್ಚರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಈ ಸಮಸ್ಯೆಯನ್ನು ಕಾನೂನಿನ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಲಾಭ ಗಳಿಕೆಯ ಉದ್ದೇಶವಿಲ್ಲದ ಕಂಪೆನಿಯಿಂದ ಒಂದು ರೂಪಾಯಿಯನ್ನು ಪಡೆಯಲು ಸಾಧ್ಯವಿಲ್ಲ. ಇದೊಂದು ಕಾನೂನು ಪ್ರಕ್ರಿಯೆ, ನಾವು ಕಾನೂನನ್ನು  ಗೌರವಿಸುತ್ತೇವೆ ಎಂದು ಶುಕ್ರವಾರ ಇಲ್ಲಿ ಸುದ್ದಿಸಂಸ್ಥೆಗೆ ತಿಳಿಸಿದರು.

Comments