ನವದೆಹಲಿ

ಮೋದಿ – ಇಮ್ರಾನ್‌ ಭೇಟಿ

ಪಾಕಿಸ್ತಾನದ ತೆಹ್ರೀಕ್ ಎ ಇನ್ಸಾಫ್‌ ಪಕ್ಷದ ನಾಯಕ ಇಮ್ರಾನ್ ಖಾನ್‌ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ನವದೆಹಲಿ (ಪಿಟಿಐ):  ಪಾಕಿಸ್ತಾನದ ತೆಹ್ರೀಕ್ ಎ ಇನ್ಸಾಫ್‌ ಪಕ್ಷದ ನಾಯಕ ಇಮ್ರಾನ್ ಖಾನ್‌ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಬೆಳವಣಿಗೆಗಳು ಉಭಯ ದೇಶಗಳ ಬಾಂಧವ್ಯ ವೃದ್ಧಿಸಲು ಸಹಕಾರಿಯಾಗಲಿವೆ ಎಂಬ ಭರವಸೆಯನ್ನು ಉಭಯ ನಾಯಕರು ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಅವರ ಕರೆಯ ಮೇರೆಗೆ ಇಮ್ರಾನ್‌ ಖಾನ್ ಭಾರತಕ್ಕೆ ಭೇಟಿ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.

ಈ ವೇಳೆ, ಪಾಕ್‌ಗೆ ಭೇಟಿ ನೀಡುವಂತೆ ಮೋದಿ ಅವರನ್ನು ಇಮ್ರಾನ್ ಖಾನ್‌ ಆಹ್ವಾನಿಸಿದರು ಎನ್ನಲಾಗಿದೆ.

ಬುಧವಾರ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಭಾರತದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್‌ ಅವರು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಒಪ್ಪಂದದ ಬಗ್ಗೆ ಮಾತುಕತೆ ನಡೆಸಿದ್ದರು.

Comments