ನಿರ್ಭಯಾ: ಕೇಂದ್ರಕ್ಕೆ ಕೋರ್ಟ್‌ ನೋಟಿಸ್‌

2012ರ ಡಿಸೆಂಬರ್ 16ರ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಾಲಾಪರಾಧಿ ಬಿಡುಗಡೆಗೆ ಸಂಬಂಧಿಸಿ ವರದಿ ಕೇಳಿ ದೆಹಲಿ ಹೈಕೋರ್ಟ್‌ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ನವದೆಹಲಿ (ಐಎಎನ್ಎಸ್‌): 2012ರ ಡಿಸೆಂಬರ್ 16ರ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಾಲಾಪರಾಧಿ ಬಿಡುಗಡೆಗೆ ಸಂಬಂಧಿಸಿ ವರದಿ ಕೇಳಿ ದೆಹಲಿ ಹೈಕೋರ್ಟ್‌ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆಯ (ಐ.ಬಿ.) ಮೂಲ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟಿಗೆ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಜಿ. ರೋಹಿಣಿ ಮತ್ತು ನ್ಯಾಯಮೂರ್ತಿ ಆರ್‌.ಎಸ್‌. ಎಂಡ್ಲ ಅವರನ್ನೊಳಗೊಂಡ ವಿಭಾಗೀಯ ಪೀಠ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಇದೇ ಡಿಸೆಂಬರ್ 15ಕ್ಕೆ ಬಾಲಾಪರಾಧಿಯ ಬಿಡುಗಡೆಗೆ ದಿನಾಂಕ ನಿಗದಿಪಡಿಸಲಾಗಿದೆ. ಆದರೆ, ಬಾಲಾಪರಾಧಿಯನ್ನು ಬಿಡುಗಡೆ ಮಾಡಬಾರದೆಂದು ಕೋರಿ ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ದೆಹಲಿ ಹೈಕೋರ್ಟ್‌ ಸ್ಫೋಟದಲ್ಲಿ ಬಾಲಾಪರಾಧಿಯ ಕೈವಾಡ ಇರುವ ಬಗ್ಗೆ ಗುಪ್ತಚರ ಇಲಾಖೆ ತನ್ನ ವರದಿಯಲ್ಲಿ ಅನುಮಾನ ವ್ಯಕ್ತಪಡಿಸಿತ್ತು. ಈ ಕಾರಣಕ್ಕಾಗಿ ಬಾಲಾಪರಾಧಿಯನ್ನು ಬಿಡುಗಡೆ ಮಾಡಬಾರದೆಂದು ಕೋರಿ ಸ್ವಾಮಿ ಅರ್ಜಿ ಸಲ್ಲಿಸಿದ್ದರು.

ಬಾಲಾಪರಾಧಿಯನ್ನು ಕಳೆದ ಮೂರು ವರ್ಷಗಳ ಕಾಲ ವೀಕ್ಷಣಾಲಯದಲ್ಲಿ (ರಿಮ್ಯಾಂಡ್‌ ಹೋಂ) ಇರಿಸಲಾಗಿತ್ತು.

Comments