ನವದೆಹಲಿ

ವಿಶ್ವದರ್ಜೆಯ 20 ವಿ.ವಿ. ಸ್ಥಾಪನೆಗೆ ಕೇಂದ್ರ ಚಿಂತನೆ

ವಿಶ್ವದರ್ಜೆಯ 20 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ನವದೆಹಲಿ: ವಿಶ್ವದರ್ಜೆಯ 20 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಹೊಸದಾಗಿ ಆರಂಭವಾಗುವ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಮತ್ತು ಆರ್ಥಿಕ ಸ್ವಾಯತ್ತತೆ ಹೊಂದಿರುತ್ತವೆ. ಇವುಗಳ ಮೇಲೆ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಯಾವುದೇ ಹಿಡಿತ ಇರುವುದಿಲ್ಲ.

ಉದ್ದೇಶಿತ 20 ವಿಶ್ವವಿದ್ಯಾಲಯಗಳ ಪೈಕಿ ಹತ್ತನ್ನು ಸರ್ಕಾರವೇ ಆರಂಭಿಸಲಿದೆ. ಉಳಿದ ಹತ್ತು ವಿಶ್ವವಿದ್ಯಾಲಯಗಳನ್ನು ಆರಂಭಿಸಲು ಖಾಸಗಿಯವರಿಗೆ ಅವಕಾಶ ನೀಡಲಾಗುತ್ತದೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಕಾರ್ಪೋರೇಟ್‌ ಸಂಸ್ಥೆಗಳು ಸೇರಿದಂತೆ ಶೈಕ್ಷಣಿಕ ವಿಷಯದಲ್ಲಿ ಆಸಕ್ತಿ ಇರುವ ಯಾವುದೇ ವ್ಯಕ್ತಿ ಅಥವಾ ಗುಂಪು ವಿಶ್ವವಿದ್ಯಾಲಯ ಆರಂಭಿಸಲು ಮುಂದೆ ಬಂದರೆ ಅವಕಾಶ ನೀಡಲಾಗುತ್ತದೆ. ಪ್ರಧಾನಿ ಕಚೇರಿಯೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾನವ ಸಂಪನ್ಮೂಲ ಸಚಿವಾಲಯ ವಿಶ್ವವಿದ್ಯಾಲಯ ಸ್ಥಾಪನೆಯ ಪ್ರಸ್ತಾವ ಸಿದ್ಧಪಡಿಸಿದೆ. ಪ್ರಧಾನಿ ಕಚೇರಿಯೊಂದಿಗೆ ಮತ್ತೊಮ್ಮೆ ಚರ್ಚೆ ನಡೆಸಿದ ಬಳಿಕ ಇದಕ್ಕೆ ಅಂತಿಮ ರೂಪ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Comments