ಮುಂಬೈ

ದಿಲೀಪ್‌ಕುಮಾರ್‌ಗೆ ಪದ್ಮವಿಭೂಷಣ

ಬಾಲಿವುಡ್‌ನ ಹಿರಿಯ ನಟ ದಿಲೀಪ್‌ಕುಮಾರ್‌ (93) ಅವರಿಗೆ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಭಾನುವಾರ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ  ದೇಶದ ಎರಡನೇ ಅತ್ಯುನ್ನತ ನಾಗ­­ರಿಕ ಪ್ರಶಸ್ತಿಯಾದ ಪದ್ಮವಿಭೂಷಣ ನೀಡಿದರು.

ಮುಂಬೈ (ಪಿಟಿಐ): ಬಾಲಿವುಡ್‌ನ ಹಿರಿಯ ನಟ ದಿಲೀಪ್‌ಕುಮಾರ್‌ (93) ಅವರಿಗೆ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಭಾನುವಾರ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ  ದೇಶದ ಎರಡನೇ ಅತ್ಯುನ್ನತ ನಾಗ­­ರಿಕ ಪ್ರಶಸ್ತಿಯಾದ ಪದ್ಮವಿಭೂಷಣ ನೀಡಿದರು. 

2015ನೇ ಸಾಲಿನ ಗಣರಾಜ್ಯೋತ್ಸವ ಸಂದರ್ಭದಲ್ಲಿ ಬಾಲಿವುಡ್‌ ನಟರಾದ ದಿಲೀಪ್‌ಕುಮಾರ್‌, ಅಮಿತಾಬ್‌ ಬಚ್ಚನ್‌ ಸೇರಿ ಹಲವು ಗಣ್ಯರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿತ್ತು. ಏಪ್ರಿಲ್‌ನಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಎಲ್ಲ ಗಣ್ಯರಿಗೆ ಪ್ರಶಸ್ತಿ ನೀಡಿದ್ದರು. ಆದರೆ, ಅನಾರೋಗ್ಯದಿಂದ ಬಳಲುತ್ತಿದ್ದ ದಿಲೀಪ್‌ಕುಮಾರ್ ಪ್ರಶಸ್ತಿ ಸ್ವೀಕರಿಸಿರಲಿಲ್ಲ.

ರಾಜನಾಥ್‌ ಸಿಂಗ್‌ ಅವರು ಭಾನುವಾರ ದಿಲೀಪ್‌ಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿ, ಪ್ರಶಸ್ತಿ ಪತ್ರ, ಪದಕ ಹಸ್ತಾಂತರಿಸಿದರು. ಬಳಿಕ ಶಾಲು ಹೊದೆಸಿ ಸನ್ಮಾನಿಸಿದರು. ದಿಲೀಪ್‌ ಪತ್ನಿ ಸಾಯಿರಾ ಬಾನು ಜತೆಗಿದ್ದರು. ಮಹಾರಾಷ್ಟ್ರದ ಗವರ್ನರ್‌ ಸಿ. ವಿದ್ಯಾಸಾಗರ್ ರಾವ್‌, ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್‌ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Comments