ಚೆನ್ನೈ

₹4,500 ಕೋಟಿ ವಿಶೇಷ ಪ್ಯಾಕೇಜ್‌ಗೆ ಕೋರಿಕೆ

ಭಾರಿ ಮಳೆಯಿಂದ ಹಾನಿಗೀಡಾಗಿರುವ ಪ್ರದೇಶಗಳನ್ನು ಸುಸ್ಥಿತಿಗೆ ತರಲು ₹ 4,500 ಕೋಟಿ ಮೊತ್ತದ ವಿಶೇಷ ಪ್ಯಾಕೇಜ್‌ ನೀಡಬೇಕೆಂದು ತಮಿಳುನಾಡು ಸರ್ಕಾರವು ಕೇಂದ್ರ ನಗರಾಭಿವೃದ್ಧಿ ಸಚಿವಾಲಯಕ್ಕೆ ಕೋರಿದೆ.

ಚೆನ್ನೈ (ಪಿಟಿಐ): ಭಾರಿ ಮಳೆಯಿಂದ ಹಾನಿಗೀಡಾಗಿರುವ ಪ್ರದೇಶಗಳನ್ನು ಸುಸ್ಥಿತಿಗೆ ತರಲು ₹ 4,500 ಕೋಟಿ ಮೊತ್ತದ ವಿಶೇಷ ಪ್ಯಾಕೇಜ್‌ ನೀಡಬೇಕೆಂದು ತಮಿಳುನಾಡು ಸರ್ಕಾರವು ಕೇಂದ್ರ ನಗರಾಭಿವೃದ್ಧಿ ಸಚಿವಾಲಯಕ್ಕೆ ಕೋರಿದೆ.

ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗಾಗಿ ಇಲ್ಲಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು  ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಸಹಾಯ ಕೋರಿ ಮನವಿ ಸಲ್ಲಿಸಿದ್ದಾರೆ.  

ಪ್ರವಾಹಪೀಡಿತ ನಗರ ಸ್ಥಳೀಯ ಪ್ರದೇಶಗಳಲ್ಲಿ ತೀವ್ರ ಹಾನಿಗೀಡಾಗಿರುವ ರಸ್ತೆಗಳು, ಕುಡಿಯುವ ನೀರು, ಒಳಚರಂಡಿ ಮತ್ತು  ತ್ಯಾಜ್ಯ  ವ್ಯವಸ್ಥೆ ಬಗ್ಗೆ ಜಯಾ ಸಚಿವರ ಗಮನ ಸೆಳೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹಾನಿಗೀಡಾಗಿರುವ ಸ್ಥಳಗಳನ್ನು ಸುಸ್ಥಿತಿಗೆ ತರಲು ಚೆನ್ನೈ ಮಹಾನಗರ ಪಾಲಿಕೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಗಣನೀಯ ಪ್ರಮಾಣದಲ್ಲಿ ಸಹಾಯದ ಅವಶ್ಯಕತೆ ಇದೆ. ಪ್ರಾಥಮಿಕ ಹಂತದಲ್ಲಿ ₹ 4,500 ಕೋಟಿಗೂ ಅಧಿಕ ಮೊತ್ತದ ಹಣದ ಅವಶ್ಯಕತೆ ಇದೆ ಎಂದು ಜಯಲಲಿತಾ ಹೇಳಿದ್ದಾರೆ ಎನ್ನಲಾಗಿದೆ.

Comments