‘ರಾಹುಲ್‌ ಇನ್ನೂ ಮಗು’: ಕೇಜ್ರಿವಾಲ್‌ ವ್ಯಂಗ್ಯ

ರೈಲ್ವೆ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ಎಎಪಿ ನಡೆಸುತ್ತಿರುವ ಪ್ರತಿಭಟನೆಯನ್ನು ಪ್ರಶ್ನಿಸಿದ್ದ ರಾಹುಲ್‌ ಗಾಂಧಿ ವಿರುದ್ಧ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಕಿಡಿ ಕಾರಿದ್ದಾರೆ.

ನವದೆಹಲಿ (ಐಎಎನ್‌ಎಸ್‌): ರೈಲ್ವೆ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ಎಎಪಿ ನಡೆಸುತ್ತಿರುವ ಪ್ರತಿಭಟನೆಯನ್ನು ಪ್ರಶ್ನಿಸಿದ್ದ ರಾಹುಲ್‌ ಗಾಂಧಿ ವಿರುದ್ಧ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಕಿಡಿ ಕಾರಿದ್ದಾರೆ.

‘ರಾಹುಲ್‌ ಇನ್ನೂ ಎಳೆ ಮಗು. ರೈಲ್ವೆ ಇಲಾಖೆ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ ಎನ್ನುವುದನ್ನು ಕಾಂಗ್ರೆಸ್‌ ಪಕ್ಷ ಇನ್ನೂ ರಾಹುಲ್‌ಗೆ ಹೇಳಿಕೊಟ್ಟಿಲ್ಲ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಶಕೂರ್‌ ಬಸ್ತಿಯಲ್ಲಿ ರೈಲ್ವೆ ಇಲಾಖೆ ಕೊಳೆಗೇರಿ ತೆರವುಗೊಳಿಸಿದ್ದನ್ನು ವಿರೋಧಿಸಿ ಆಮ್‌ ಆದ್ಮಿ ಪಾರ್ಟಿ ಪ್ರತಿಭಟನೆ ನಡೆಸುತ್ತಿದೆ.  ತೃಣಮೂಲ ಕಾಂಗ್ರೆಸ್‌ ಕೂಡ ಇದಕ್ಕೆ ಕೈಜೋಡಿಸಿದೆ.

‘ಎಎಪಿ ಯಾಕೆ ನಾಟಕ ಆಡುತ್ತಿದೆ. ದೆಹಲಿಯಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳಿಗೆ ಮೋದಿ ಮತ್ತು ಕೇಜ್ರಿವಾಲ್‌ ಸರ್ಕಾರ ಕಾರಣ’ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದರು.

Comments