ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಸ್ವಸಹಾಯ ಗುಂಪುಗಳಿಗೆ ಶೇ 7ರ ಬಡ್ಡಿದರದಲ್ಲಿ ಸಾಲ 

Last Updated 26 ಆಗಸ್ಟ್ 2016, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ದೇಶದಲ್ಲಿರುವ ಮಹಿಳಾ ಸ್ವ ಸಹಾಯ ಸಂಘಗಳಿಗೆ (ಎಸ್‌ಎಚ್‌ಜಿ) ವಾರ್ಷಿಕ ಶೇ 7ರ ಬಡ್ಡಿದರದಲ್ಲಿ ಸಾಲ ನೀಡುವಂತೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬ್ಯಾಂಕ್‌ಗಳಿಗೆ  ಸೂಚನೆ ನೀಡಿದೆ.

‘ಕೇಂದ್ರ ಸರ್ಕಾರದ 2016–17ರ ಪರಿಷ್ಕೃತ ಮಾರ್ಗಸೂಚಿಯಂತೆ, ದೀನದಯಾಳ್‌ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ಗ್ರಾಮೀಣ   ಜೀವನೋಪಾಯ ಯೋಜನೆಯ ಅಡಿಯಲ್ಲಿ   ಎಲ್ಲಾ ಮಹಿಳಾ ಸ್ವ ಸಹಾಯ ಸಂಘಗಳು ಶೇ 7ರ ಬಡ್ಡಿದರದಲ್ಲಿ ₹3 ಲಕ್ಷದವರೆಗೆ ಸಾಲ ಪಡೆಯಲು ಅರ್ಹವಾಗಿವೆ ಎಂದು ಆರ್‌ಬಿಐ ಪ್ರಕಟಣೆ ತಿಳಿಸಿದೆ.

ಸ್ವರ್ಣಜಯಂತಿ ಗ್ರಾಮ ಸ್ವರಾಜ್‌ ಯೋಜನೆಯಡಿ (ಎಸ್‌ಜಿಎಸ್‌ವೈ) ಸಬ್ಸಿಡಿ ಪಡೆಯುತ್ತಿರುವ ಸ್ವ ಸಹಾಯ ಗುಂಪುಗಳು ಈ ಸಾಲ ಸೌಲಭ್ಯ ಪಡೆಯಲು ಅರ್ಹವಲ್ಲ ಎಂದು ಎಂದು ತಿಳಿಸಿದೆ. ಗ್ರಾಮೀಣ ಪ್ರದೇಶದ  ಎಲ್ಲಾ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಶೇ 7 ರ ಬಡ್ಡಿದರದಲ್ಲಿ ಬ್ಯಾಂಕ್‌ಗಳು ಸಾಲ ನೀಡಲಿವೆ ಎಂದು ಆರ್‌ಬಿಐ ತಿಳಿಸಿದೆ.

ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವ ಗುಂಪುಗಳಿಗೆ  ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಹೆಚ್ಚುವರಿಯಾಗಿ ಶೇ 3ರಷ್ಟು ಅನುದಾನ ನೀಡುತ್ತಿದೆ ಎಂದು  ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT