ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಿಗೆರೆ ಬಯಲು ಬಹಿರ್ದೆಸೆ ಮುಕ್ತ ತಾಲ್ಲೂಕು: ರಾಗಪ್ರಿಯ

Last Updated 27 ಆಗಸ್ಟ್ 2016, 7:07 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂ ಕನ್ನು ಸೆಪ್ಟಂಬರ್ ಅಂತ್ಯದೊಳಗೆ ಬಯಲು ಬಹಿರ್ದೆಸೆ ಮುಕ್ತ ತಾಲ್ಲುಕ ನ್ನಾಗಿಸುವುದಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆರ್‌.ರಾಗಪ್ರಿಯಾ ತಿಳಿಸಿದರು.

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕೂದುವಳ್ಳಿ ಗ್ರಾಮ ಪಂಚಾಯಿತಿಯ ತೋರಣಮಾವು ಹಾಗೂ ಚಿತ್ತೂವಳ್ಳಿ ಗ್ರಾಮಗಳಿಗೆ ಶುಕ್ರವಾರ ಮುಂಜಾನೆ ಸುರಿಯುತ್ತಿದ್ದ ಮಳೆಯಲ್ಲಿಯೇ ಭೇಟಿ ನೀಡಿ, ಬಹಿರ್ದೆಸೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಬಯಲು ಬಹಿರ್ದೆಸೆಗೆ ತೆರಳುತ್ತಿದ್ದವರಿಗೆ ಜಾಗೃತಿ ಮೂಡಿಸಿದರು.

‘ಸೆಪ್ಟೆಂಬರ್‌ ಅಂತ್ಯದೊಳಗೆ ಮೂಡಿ ಗೆರೆ ತಾಲ್ಲೂಕು ಹಾಗೂ ಅಕ್ಟೋಬರ್ ತಿಂಗಳೊಳಗೆ ಇಡೀ ಜಿಲ್ಲೆಯನ್ನು ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತವನ್ನಾಗಿಸಲು ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಟ್ರಿಗರಿಂಗ್ ನಡೆಸುತ್ತಿದ್ದೇವೆ’ ಎಂದರು.

ಇತ್ತೀಚಿನ ದಿನಗಳಲ್ಲಿ ಸಾರ್ವಜನಿ ಕರಿಂದ ಸ್ವಚ್ಛತೆಯ ಬಗ್ಗೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಶೌಚಾಲಯ ನಿರ್ಮಾಣಕ್ಕೆ ಅವಶ್ಯವಿರುವ ಮರಳು ಪೂರೈಕೆಯ ಕೊರತೆ ಕೇಳಿಬರುತ್ತಿದೆ. ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು.

ಕೂದುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  81 ಕುಟುಂಬಗಳಲ್ಲಿ ಶೌಚಾಲಯ ಇಲ್ಲದಿರುವುದು ಕಂಡು ಬಂದಿದೆ. ಈ ಬಗ್ಗೆ ಅವರಿಗೆ ಶೌಚಾಲಯ ನಿರ್ಮಿಸಲು ಸೂಚಿಸಿದಾಗ, ಶೀಘ್ರದ ಲ್ಲಿಯೇ ಶೌಚಾಲಯ ನಿರ್ಮಿಸಿಕೊಳ್ಳು ವುದಾಗಿ ತಿಳಿಸಿದ್ದಾರೆ ಎಂದರು.

ಈಗಾಗಲೇ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ, ಶೃಂಗೇರಿ ಮತ್ತು ಎನ್‌.ಆರ್‌.ಪುರ ತಾಲ್ಲೂಕುಗಳಲ್ಲಿ ಶೇ 100 ಶೌಚಾಲಯಗಳ ನಿರ್ಮಾಣ ಆಗಿದೆ. ಶೌಚಾಲಯ ಬಳಕೆಯ ಬಗ್ಗೆ ಪರಿಶೀ ಲಿಸಲು ಸಮಿತಿ ರಚಿಸಲಾಗಿದೆ. ಅಕ್ಟೋ ಬರ್ 2ರಂದು ಈ ಮೂರು ತಾಲ್ಲೂಕು ಗಳನ್ನು ಬಯಲು ಬಹಿರ್ದೆಸೆ ಮುಕ್ತ ತಾಲ್ಲೂಕುಗಳನ್ನಾಗಿ ಅಧಿಕೃತ ಘೋಷಣೆ ಮಾಡಲಾಗುವುದು ಎಂದರು.

ಇದೇ ವೇಳೆ ತೋರಣಮಾವು ಹಾಗೂ ಚಿತ್ತೂವಳ್ಳಿ ಗ್ರಾಮಗಳಲ್ಲಿ ಟ್ರಿಗರಿಂಗ್ ಆರಂಭಿಸಿದಾಗ ಸುಮಾರು 10ಕ್ಕೂ ಹೆಚ್ಚು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಗುದ್ದಲಿ ಹಾರೆ ಹಿಡಿದು ಶೌಚಾಲಯಗಳ ಗುಂಡಿ ತೆಗೆದು ಅಧಿಕಾರಿಗಳಿಗೆ ಸ್ಪಂದಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಾಜಗೋಪಾಲ್, ಸಿಪಿಒ ನಾಗರಾಜ್, ಎಂಎನ್‌ಆರ್‌ಇಜಿ ಸಹಾ ಯಕ ನಿರ್ದೇಶಕ ಈಶ್ವರಪ್ಪ, ಪ್ರಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT