ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಖಾ ಮತ್ತೆ ಎತ್ತಂಗಡಿ

Last Updated 27 ಆಗಸ್ಟ್ 2016, 19:36 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಮರೀಗೌಡ ಅವರ ವಿರುದ್ಧ ದೂರು ನೀಡಿದ್ದ ಐಎಎಸ್‌ ಅಧಿಕಾರಿ ಸಿ. ಶಿಖಾ ಅವರನ್ನು ರಾಜ್ಯ ಸರ್ಕಾರ ಕೇವಲ 17 ದಿನಗಳಲ್ಲಿ ಎರಡನೇ ಬಾರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಶಿಖಾ ಅವರನ್ನು ಈ ತಿಂಗಳ 10ರಂದು ಸಮಾಜ ಕಲ್ಯಾಣ  ಆಯುಕ್ತರಾಗಿ ನೇಮಿಸಲಾಗಿತ್ತು. ಇದೀಗ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ಸ್ಥಾನಕ್ಕೆ ಈ ಹಿಂದೆ ಅದೇ ಸ್ಥಾನದಲ್ಲಿದ್ದ ಎಂ.ವಿ. ಸಾವಿತ್ರಿ ಅವರನ್ನು ಮತ್ತೆ ನೇಮಿಸಲಾಗಿದೆ. ವರ್ಗಾವಣೆಗೊಂಡ ಇತರೆ ಅಧಿಕಾರಿಗಳು: ಲೋಕೋಪಯೋಗಿ, ಬಂದರು ಮತ್ತು ಒಳನಾಡು ಸಾರಿಗೆ ಪ್ರಧಾನ ಕಾರ್ಯದರ್ಶಿ ಎಂ. ಲಕ್ಷ್ಮಿನಾರಾಯಣ ಅವರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಎಸ್‌.ಆರ್‌. ಉಮಾಶಂಕರ್‌ ಅವರನ್ನು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿ ನೇಮಿಸಲಾಗಿದೆ. ಅಲ್ಲದೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೆಚ್ಚುವರಿ ಹೊಣೆ ಕೊಡಲಾಗಿದೆ. ಪಿ.ಎಸ್‌. ವಸ್ತ್ರದ್‌ ಕಾರ್ಯದರ್ಶಿ, ಸಹಕಾರ ಇಲಾಖೆ.

ದರ್ಪಣ್‌ ಜೈನ್‌
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ–ಆಡಳಿತ). ಭೂಸಾರಿಗೆ ನಿರ್ದೇಶನಾಲಯದ ಆಯುಕ್ತರಾಗಿ ಹೆಚ್ಚುವರಿ ಹೊಣೆ.
ಮಂಜುನಾಥ್‌ ನಾಯಕ್‌
ಆಯುಕ್ತ, ಅಬಕಾರಿ ಇಲಾಖೆ.
ಹೇಮಾಜಿ ನಾಯಕ್‌– ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾಗಳ ಅಭಿವೃದ್ಧಿ ನಿಗಮ.
ವಿಪುಲ್‌ ಬನ್ಸಲ್  ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT