ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮ್ನೆಸ್ಟಿ ವಿರುದ್ಧ ಕ್ರಮಕ್ಕೆ ಗೃಹ ಸಚಿವರ ಮೀನ-ಮೇಷ: ಅನಂತಕುಮಾರ್‌

Last Updated 28 ಆಗಸ್ಟ್ 2016, 11:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಬೆಂಗಳೂರಿನ ಆಮ್ನೆಸ್ಟಿ ಸಂಸ್ಥೆಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿದವರ ಮೇಲೆ ಕಾನೂನು ಕ್ರಮ ಜರುಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಅವರು ಮೀನ–ಮೇಷ ಎಣಿಸುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಆರೋಪಿಸಿದರು.

ಹುಬ್ಬಳ್ಳಿಯ ವಿಮಾನನಿಲ್ದಾಣದಲ್ಲಿ ಸೋಮವಾರ ಮಾತನಾಡಿದ ಅವರು, ರಾಜ್ಯ ಸರ್ಕಾರ ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕ್ರಮ ಜರುಗಿಸುವ ಬದಲು ಅಂಥ ಪ್ರಸಂಗಗಳಿಗೆ ಕುಮ್ಮಕ್ಕು ನೀಡುತ್ತಿದೆ. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಕ್ಕೆ ವಹಿಸುವಂತೆ, ಕೇಂದ್ರ ಗೃಹ ಸಚಿವರಿಗೆ ಎಬಿವಿಪಿ ಮನವಿ ನೀಡಿದೆ. ಎಬಿವಿಪಿ ರಾಷ್ಟ್ರ ಪ್ರೇಮವುಳ್ಳ ವಿದ್ಯಾರ್ಥಿ ಸಂಘಟನೆ. ಎಬಿವಿಪಿ ಸಂಘಟನೆಯನ್ನು ಯಾರು ತಪ್ಪು ದಾರಿಗೆ ಎಳೆಯುತ್ತಿಲ್ಲ ಎಂದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT