ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ ಚಾಲಕನಾಗಿದ್ದ ಯುವಕ ನೇಣಿಗೆ ಶರಣು

Last Updated 28 ಆಗಸ್ಟ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮೆಟ್ರೊ ರೈಲು ಚಾಲಕನಾಗಿದ್ದ ದೀಪಕ್‌ ಕುಮಾರ್ (30) ಎಂಬುವವರು ದಾಸರಹಳ್ಳಿಯಲ್ಲಿರುವ ಸ್ನೇಹಿತನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಾಂಡವಪುರ ಮೂಲದ ದೀಪಕ್, ಎರಡೂವರೆ ವರ್ಷದಿಂದ ಮೆಟ್ರೊ ಚಾಲಕರಾಗಿದ್ದರು. ಪಾನಮತ್ತರಾಗಿ ಕೆಲಸಕ್ಕೆ ಬಂದಿದ್ದರೆಂಬ ಕಾರಣಕ್ಕೆ, ಮೆಟ್ರೊ ಅಧಿಕಾರಿಗಳು ಮೂರು ತಿಂಗಳ ಹಿಂದೆ ಅವರನ್ನು ಕೆಲಸದಿಂದ ತೆಗೆದು ಹಾಕಿದ್ದರು.  ಆ ನಂತರ ದೀಪಕ್ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ದೀಪಕ್ ಅವರು ಶನಿವಾರ ರಾತ್ರಿ ದಾಸರಹಳ್ಳಿಯ ಸ್ನೇಹಿತನ ಮನೆಗೆ ಹೋಗಿದ್ದರು. ಕೆಲಸದ ನಿಮಿತ್ತ ಅವರ ಸ್ನೇಹಿತ ಭಾನುವಾರ ಬೆಳಿಗ್ಗೆ ಹೊರಗೆ ಹೋಗಿದ್ದರು. ಆ ನಂತರ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರು ಮನೆಗೆ ಮರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

‘ಮೆಟ್ರೊ ಅಧಿಕಾರಿಗಳ ಕಿರುಕುಳದಿಂದಲೇ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬ ಸದಸ್ಯರು ಆರೋಪ ಮಾಡಿದ್ದಾರೆ. ಹೀಗಾಗಿ, ಸೋಮವಾರ ಮೆಟ್ರೊ ಅಧಿಕಾರಿಗಳ ಹೇಳಿಕೆ ಪಡೆಯಲಾಗುವುದು ಎಂದರು. 

ಡೈರಿ ಪತ್ತೆ: ದೀಪಕ್ ಅವರು ಸ್ನೇಹಿತನ ಮನೆಗೆ ಬರುವಾಗ ತಮ್ಮ ಡೈರಿಯನ್ನೂ ತೆಗೆದುಕೊಂಡು ಬಂದಿದ್ದರು. ಪೊಲೀಸರು ಅದನ್ನು ಜಪ್ತಿ ಮಾಡಿದ್ದಾರೆ.
‘ಬೆಂಗಳೂರಿಗೆ ಬಂದಾಗಿನಿಂದ ಅನುಭವಿಸಿದ ಕಷ್ಟಗಳನ್ನು ಅದರಲ್ಲಿ ಬರೆದಿದ್ದಾರೆ. ಅಲ್ಲದೆ, ಮೆಟ್ರೊ ಅಧಿಕಾರಿಗಳು ಕೊಟ್ಟಿದ್ದ ನೋಟಿಸ್‌ಗಳನ್ನೂ ಅದರಲ್ಲಿ ಇಟ್ಟಿದ್ದಾರೆ. ಆದರೆ, ಸಾವಿಗೆ ಕಾರಣವೇನು ಎಂಬ ಬಗ್ಗೆ ಎಲ್ಲಿಯೂ ತಿಳಿಸಿಲ್ಲ’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT