ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಸಭೆಗೆ ಸತ್ಯಮಂಗಲ ಸೇರ್ಪಡೆ: ಸಲಹೆ

ವಿದ್ಯಾ ನಗರದಲ್ಲಿ ಮಾಜಿ ಯೋಧನ ಪುತ್ಥಳಿ ಅನಾವರಣ ಮಾಡಿದ ಸಚಿವ
Last Updated 29 ಆಗಸ್ಟ್ 2016, 11:13 IST
ಅಕ್ಷರ ಗಾತ್ರ

ಹಾಸನ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಗ್ರಾಮ ಪಂಚಾಯಿತಿ  ಸತ್ಯಮಂಗಲವನ್ನು ಹಾಸನ ನಗರಸಭೆ ವ್ಯಾಪ್ತಿಗೆ ಸೇರಿಸಿದರೆ ಅಧಿಕ ಸೌಲಭ್ಯ ಪಡೆಯಬಹುದು. ಈ ನಿಟ್ಟಿನಲ್ಲಿ ಗ್ರಾಮಸ್ಥರು ಹಾಗೂ ಗ್ರಾ.ಪಂ. ಸದಸ್ಯರು  ತೀರ್ಮಾನ ಕೈಗೊಳ್ಳಬೇಕು ಎಂದು  ಸಚಿವ ಎ. ಮಂಜು ಸಲಹೆ ನೀಡಿದರು.

ಸತ್ಯಮಂಗಲ ಗ್ರಾ.ಪಂ. ವ್ಯಾಪ್ತಿಯ ವಿದ್ಯಾ ನಗರದಲ್ಲಿ ವಿದ್ಯಾನಗರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ನಿರ್ಮಿಸಿರುವ ಮಾಜಿ ಯೋಧ ಎಚ್.ಎನ್.ಮಂಜೇಗೌಡರ ಪುತ್ಥಳಿ ಅನಾವರಣ ನೆರವೇರಿಸಿ ಮಾತನಾಡಿದ ಅವರು, ನಗರ ಪ್ರದೇಶಗಳಿಗೆ ಸರ್ಕಾರದಿಂದ ಅಧಿಕ ಪ್ರಮಾಣದ ಅನುದಾನ ಬಿಡುಗಡೆಯಾಗುತ್ತದೆ. ಆದರೆ, ಗ್ರಾಮ ಪಂಚಾಯಿತಿಗಳಿಗೆ ಕಡಿಮೆ ಇರುತ್ತದೆ. ಸತ್ಯಮಂಗಲ 29 ಸಾವಿರ ಜನಸಂಖ್ಯೆ ಹೊಂದಿದ್ದು, ಹಲವು ಸಮಸ್ಯೆಗಳಿಂದ ಬಳಲುತ್ತಿದೆ.

ಕುಡಿಯುವ ನೀರು, ರಸ್ತೆ, ಒಳಚರಂಡಿ, ವಿದ್ಯುತ್ ಹೀಗೆ ಅನೇಕ ಸಮಸ್ಯೆಗಳಿಂದ ಬಡಾವಣೆ ನರಳುತ್ತಿದೆ. ಪಂಚಾಯಿತಿಗೆ ಬರುವ ಅನುದಾನ ನಿರೀಕ್ಷಿತ ಪ್ರಮಾಣದಲ್ಲಿ ಇರುವುದಿಲ್ಲ. ಆದ್ದರಿಂದ ನಗರಸಭೆ ವ್ಯಾಪ್ತಿಗೆ ಸೇರಿಸಲು ಚಿಂತನೆ ನಡೆಸಬೇಕು. ಈ ಸಂಬಂಧ ಪಂಚಾಯಿತಿ ಸದಸ್ಯರು ಮಹತ್ವದ ನಿರ್ಧಾರ ಕೈಗೊಳ್ಳಬೇಕು. ಅಧಿಕಾರ ಕೈತಪ್ಪುತ್ತದೆ ಎಂದು ನಗರ ವ್ಯಾಪ್ತಿಗೆ ಸೇರದಿದ್ದರೆ ಮೂಲಭೂತ ಸೌಕರ್ಯ ಗಳಿಂದ ವಂಚಿತರಾಗ ಬೇಕಾಗುತ್ತದೆ. ಅಮೃತ್ ಯೋಜನೆಯಡಿ ನಗರಕ್ಕೆ ಕುಡಿಯುವ ನೀರು ಒದಗಿಸಲಾಗುತ್ತಿದ್ದು, ವಿದ್ಯಾ ನಗರಕ್ಕೂ ಅದು ತಲುಪಬೇಕು. ಆದ್ದರಿಂದ ಇಲ್ಲಿನ ಜನರು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು.

ಶಾಸಕ ಎಚ್.ಎಸ್.ಪ್ರಕಾಶ್ ಮಾತನಾಡಿ, ಸತ್ಯಮಂಗಲವನ್ನು ಪಟ್ಟಣ ಪಂಚಾಯಿತಿಯಾಗಿ ಮಾಡಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ. ನಗರಸಭೆಗೆ ಸೇರ್ಪಡೆ ಮಾಡುವಂತೆ ಎರಡು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಅಧಿಕಾರ ಕಳೆದುಕೊಳ್ಳುತ್ತೇವೆ ಎಂಬ ನಿರಾಸೆ ಯಿಂದ ಪಂಚಾಯಿತಿ ಪ್ರತಿನಿಧಿಗಳು ನಿರಾಸಕ್ತಿ ತೋರುತ್ತಿದ್ದಾರೆ.

ಜನಸಂಖ್ಯೆ ಹೆಚ್ಚಾದಂತೆ ಸಮಸ್ಯೆಗಳು ಅಧಿಕ ವಾಗುತ್ತಿವೆ. ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಎರಡು ತಿಂಗಳಲ್ಲಿ ಅಮೃತ್ ಯೋಜನೆಗೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಾ ಮೋಹನ್, ಸದಸ್ಯರಾದ ಎಂ.ಪಿ. ಪ್ರದೀಪ್, ಎಸ್. ಪುಟ್ಟೇಗೌಡ, ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಬಿ. ಶಿವರಾಮ್, ಕೆ. ಮಂಚಶೆಟ್ಟಿ, ಪ್ರೀತಂ ಜೆ. ಗೌಡ, ಪುಷ್ಪಾ ದರ್ಶನಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT