ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಬಹುಮುಖ ಪ್ರತಿಭೆ ಅನಾವರಣ

ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ
Last Updated 29 ಆಗಸ್ಟ್ 2016, 11:22 IST
ಅಕ್ಷರ ಗಾತ್ರ

ಕುಶಾಲನಗರ: ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ನಡೆದ ನಂಜರಾಯಪಟ್ಟಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಿಕೋತ್ಸವದಲ್ಲಿ ಮಕ್ಕಳ  ಪ್ರತಿಭೆ ಅನಾವರಣಗೊಂಡಿತು.

ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನ ಹಾಗೂ ನಂಜರಾಯಪಟ್ಟಣ ಕ್ಲಸ್ಟರ್ ಆಶ್ರಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ವಿವಿಧ ಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಕಂಠ ಪಾಠ, ಧಾರ್ಮಿಕ ಪಠಣ, ಲಘು ಸಂಗೀತ, ಛದ್ಮವೇಷ , ಚಿತ್ರಕಲೆ, ಅಭಿನವ ಗೀತೆ, ಪ್ಲೈಮಾಡ್ಲಿಂಗ್, ನಾಟಕ, ದೃಶ್ಯಕಲೆ, ಸಂಗೀತೋತ್ಸವ, ಜಾನಪದ ಗೀತೆ, ಕೋಲಾಟ ಸೇರಿದಂತೆ ಸುಮಾರು 45 ಸ್ಪರ್ಧೆಗಳನ್ನು ತರಗತಿವಾರು ವಿದ್ಯಾರ್ಥಿಗಳಿಗೆ ನಡೆಸಲಾಯಿತು. ಛದ್ಮವೇಷ ಸ್ಪರ್ಧೆಯಲ್ಲಿ ವಿವಿಧ ವೇಷಭೂಣಗಳನ್ನು ತೊಟ್ಟಿದ್ದ ಮಕ್ಕಳು ಎಲ್ಲರ ಗಮನ ಸೆಳೆದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ–ನಿರ್ದೇಶಕಿ ಮಾಯಾದೇವಿ ಗಲಗಲಿ ಉದ್ಘಾಟಿಸಿ ಮಾತನಾಡಿ ಪ್ರತಿಭಾ ಕಾರಂಜಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು.

ಜಿ.ಪಂ.ಸದಸ್ಯ ಕೆ.ಎಂ.ಲತೀಪ್ ಮಾತನಾಡಿದರು.  ಅಧ್ಯಕ್ಷತೆಯನ್ನು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ವಹಿಸಿದ್ದರು. ಜಿ.ಪಂ. ಸದಸ್ಯೆ ಸುನೀತಾ, ತಾ.ಪಂ. ಸದಸ್ಯರಾದ ಪುಷ್ಪಾ ಜನಾರ್ದನ್,  ಸುಹಾದ್ ಆಶ್ರಫ್, ನಂಜರಾಯಪಟ್ಟಣ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸತ್ಯನಾರಾಯಣ, ಮೊರಾರ್ಜಿ ಶಾಲೆ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ, ಮುಖಂಡರಾದ ಗ್ರಾ.ಪಂ.ಸದಸ್ಯ ಶಶಿಭೀಮಯ್ಯ, ವಕೀಲ ನಂದಕುಮಾರ್, ನಾಗರಾಜು, ಬೋಪಣ್ಣ, ಧನಪಾಲ್ ಉಪಸ್ಥಿತರಿದ್ದರು. ವಿವಿಧ ಶಾಲೆಯ ಶಿಕ್ಷಕ ವರ್ಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ
ಶನಿವಾರಸಂತೆ:
ಗ್ರಾಮೀಣ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸರ್ಕಾರಿ ಶಾಲೆಯ ಮಕ್ಕಳ ಪ್ರತಿಭೆಗೆ ಕನ್ನಡಿ ಹಿಡಿಯುವ ವೇದಿಕೆಯಾಗಿದೆ ಎಂದು ವಿಘ್ನೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷ ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.

ಶನಿವಾರಸಂತೆ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಎಸ್.ಅನಂತಕುಮಾರ್, ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷ ಮಹಮ್ಮದ್ ಗೌಸ್, ಸಮೂಹ ಸಂಪನ್ಮೂಲ ವ್ಯಕ್ತಿ ನಿರ್ಮಲಾ, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್, ಪ್ರಾಂಶುಪಾಲ ಶಿವಪ್ರಕಾಶ್ ಹಾಗೂ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಮಂಜುನಾಥ್ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ಬಾನುರಿಜ್ವಾನ್ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT