ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಪತಿ ಪ್ರತಿಷ್ಠಾಪನೆ:ಅನುಮತಿ ಅಗತ್ಯ

ಪೊಲೀಸ್ ಇಲಾಖೆಯಿಂದ ಜನಸಂಪರ್ಕ ಕಾರ್ಯಕ್ರಮ
Last Updated 29 ಆಗಸ್ಟ್ 2016, 12:00 IST
ಅಕ್ಷರ ಗಾತ್ರ

ವಿಜಯಪುರ: ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವ ಮುನ್ನ ಪುರಸಭೆ ಹಾಗು ಪೊಲೀಸ್ ಇಲಾಖೆಯಿಂದ ಅಧಿಕೃತವಾಗಿ ಅನುಮತಿಯನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಜಗದೀಶ್ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಗಣೇಶ ಹಬ್ಬದ ಅಂಗವಾಗಿ ಆಯೋಜನೆ ಮಾಡಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಮುದಾಯಗಳ ಮುಖಂಡರುಗಳೊಂದಿಗೆ ಅವರು ಮಾತನಾಡಿದರು.

ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವ ಮುನ್ನ ಸ್ಥಳೀಯ ಗ್ರಾಮ ಪಂಚಾಯ್ತಿಗಳು, ಹಾಗೂ ಪುರಸಭೆಯಿಂದ ಅಧಿಕೃತವಾಗಿ ಅನುಮತಿ ಪಡೆಯಬೇಕು, ರಸ್ತೆಗಳಲ್ಲಿ ಪ್ರತಿಷ್ಠಾಪನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬಾರದು, ಗಣಪತಿ ಮೂರ್ತಿಗಳನ್ನು ಸಂಜೆ ಆರು ಗಂಟೆಯೊಳಗೆ ವಿಸರ್ಜನೆ ಮಾಡಬೇಕು, ಮೆರವಣಿಗೆ ಮಾಡುವಂತಹ ಮಾರ್ಗಗಳ ಬಗ್ಗೆ ಮುಂಚಿತವಾಗಿಯೆ ಪೊಲೀಸ್ ಠಾಣೆಗೆ ಮಾಹಿತಿಯನ್ನು ಒದಗಿಸಬೇಕು, ಮೆರವಣಿಗೆಯ ವೇಳೆ ಹಾಗೂ ಗಣಪತಿ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಿರುವಂತಹ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದರೆ ಆಯೋಜಕರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪಿಎಸ್‌ಐ ಆದ ಎಂ.ಶ್ರೀನಿವಾಸ್ ಮಾತನಾಡಿ, ಗಣಪತಿ ಮೂರ್ತಿಯ ಪ್ರತಿಷ್ಠಾಪನೆ ಕೇವಲ ಧಾರ್ಮಿಕವಾಗಿದ್ದು, ಪ್ರತಿಷ್ಠಾಪನೆಯ ಸ್ಥಳದಲ್ಲಿ ಆರ್ಕೆಸ್ಟ್ರಾದಂತಹ ಯಾವುದೇ ಕಾರ್ಯಕ್ರಮಗಳು ಹಾಗೂ ಅಶ್ಲೀಲ ನೃತ್ಯಗಳಿಗೆ ಅವಕಾಶಗಳನ್ನು ನೀಡುವುದಿಲ್ಲ, ಮೂರ್ತಿಗಳ ವಿಸರ್ಜನೆಯ ವೇಳೆ ಮಕ್ಕಳನ್ನು ಕರೆ ದೊಯ್ಯಬಾರದು, ಪಿಓಪಿ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ನೀಡುವುದಿಲ್ಲ ಎಂದರು. ಕನಕರಾಜು, ಭಗವನ್, ಮುನಿಕೃಷ್ಣಪ್ಪ, ರಾಮಕೃಷ್ಣ  ಹೆಗಡೆ, ಕರವೇ ಶಿವಕುಮಾರ್, ಆಜಾಮ್ಪಾಷ, ಕೆ.ಸತೀಶ್, ಶಿವಪ್ರಕಾಶ್, ಮಂಜುನಾಥ್, ಕೃಷ್ಣಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT