ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಲೀನ ದಿಟ್ಟ ಹೆಜ್ಜೆ

Last Updated 29 ಆಗಸ್ಟ್ 2016, 19:30 IST
ಅಕ್ಷರ ಗಾತ್ರ

ವಿಶ್ವವಿದ್ಯಾಲಯಗಳ ವಿಲೀನಕ್ಕೆ ಸರ್ಕಾರ ಚಿಂತನೆ ನಡೆಸಿರುವುದು ಸ್ವಾಗತಾರ್ಹ.  ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಉದ್ದೇಶ ನಮ್ಮ  ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಂಸ್ಕೃತಿಕ ಜ್ಞಾನವನ್ನು ಆಳವಾಗಿ ತಿಳಿದುಕೊಳ್ಳುವ ಹಾಗೂ ಅದರ ಬಗ್ಗೆ ಸಂಶೋಧನೆ ಮಾಡುವ, ಮುಂಬರುವ ಪೀಳಿಗೆಗೆ ನಮ್ಮ ಪರಂಪರೆ, ಸಂಸ್ಕೃತಿಯ ಪರಿಚಯ ಮಾಡಿಕೊಡುವುದೇ ಆಗಿದೆ.

ಆದರೆ, ಪ್ರಗತಿಯ ಭರಾಟೆಯಲ್ಲಿ, ವಿಷಯಕ್ಕೊಂದು ವಿಶ್ವವಿದ್ಯಾಲಯವನ್ನು ಪ್ರತ್ಯೇಕವಾಗಿ ತೆರೆಯುತ್ತಾ ಹೋದರೆ ಶಿಕ್ಷಣವನ್ನು ಸಂಕೀರ್ಣತೆಗೆ ಒಡ್ಡಿ ಹಲವು ಕಂದರಗಳುಂಟಾಗಿ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುವುದರಲ್ಲಿ ಸಂದೇಹವಿಲ್ಲ.

ಒಂದೇ ವಿಶ್ವವಿದ್ಯಾಲಯದಲ್ಲಿ ಹಲವು ವಿಷಯಗಳ ಅಧ್ಯಯನಕ್ಕೆ ಅವಕಾಶ ಇದ್ದರೆ ಅಲ್ಲಿನ ಶಿಕ್ಷಣಾರ್ಥಿಗಳಿಗೆ ತಾವು ಅಭ್ಯಸಿಸುವ ನಿರ್ದಿಷ್ಟ ವಿಷಯದೊಂದಿಗೆ ಇನ್ನಿತರ ವಿಷಯಗಳ ಬಗ್ಗೆಯೂ ತಿಳಿವಳಿಕೆ ಮೂಡುತ್ತದೆ. ಆದಕಾರಣ ಈ ನಿಟ್ಟಿನಲ್ಲಿ ಸರ್ಕಾರದ  ಆಲೋಚನೆ ವೈಜ್ಞಾನಿಕವಾಗಿ ಮತ್ತು ಆರ್ಥಿಕವಾಗಿ ಸಮರ್ಥನೀಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT