ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್ ವಿವರ ಸೋರಿಕೆ: ಸರ್ಕಾರ ವಜಾಕ್ಕೆ ಆಗ್ರಹ

Last Updated 29 ಆಗಸ್ಟ್ 2016, 19:30 IST
ಅಕ್ಷರ ಗಾತ್ರ

ಪುದುಚೇರಿ: ಬಜೆಟ್ ಮಂಡಿಸುವ ಮೊದಲೇ ಅದರಲ್ಲಿನ ವಿವರಗಳು ಮಾಧ್ಯಮಗಳಲ್ಲಿ ಮತ್ತು ಅಧಿಕೃತ ವೆಬ್‌ಸೈಟ್‌ನಲ್ಲಿ ಬಹಿರಂಗ ಆಗಿರುವುದರಿಂದ ಸರ್ಕಾರವನ್ನು ವಜಾ ಮಾಡಲು ರಾಷ್ಟ್ರಪತಿ ಅವರಿಗೆ ಶಿಫಾರಸು ಮಾಡಬೇಕು ಎಂದು ವಿರೋಧ ಪಕ್ಷ ಎಐಎಡಿಎಂಕೆ ಒತ್ತಾಯಿಸಿದೆ.

ಮುಖ್ಯಮಂತ್ರಿ ನಾರಾಯಣ ಸ್ವಾಮಿ ಅವರು ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನವನ್ನು ಉಲ್ಲಂಘಿಸಿರುವುದರಿಂದ ಸರ್ಕಾರವನ್ನು ವಜಾ ಮಾಡಲು ಶಿಫಾರಸು ಮಾಡುವಂತೆ ಲೆಫ್ಟಿನೆಂಟ್‌ ಗವರ್ನರ್‌ ಕಿರಣ್ ಬೇಡಿ ಅವರಿಗೆ ಮನವಿ ಸಲ್ಲಿಸಿರುವುದಾಗಿ ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕ ಎ. ಅನ್ಬಳಗನ್ ತಿಳಿಸಿದ್ದಾರೆ.

2016–17ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿರುವ ಇಲಾಖಾವಾರು ಹಂಚಿಕೆಯ ವಿವರ ಸೋಮವಾರದ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಇದಲ್ಲದೆ ಸರ್ಕಾರಿ ವೆಬ್‌ಸೈಟ್‌ನಲ್ಲಿ ಬಜೆಟ್‌ನ ಪೂರ್ತಿ ವಿವರಗಳು ಇವೆ. ಆದ್ದರಿಂದ ಸದನದಲ್ಲಿ ಬಜೆಟ್ ಮಂಡಿಸುವ ಅಗತ್ಯವಾದರೂ ಏನಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಇದುವರೆಗೆ ಅನುಸರಿಸಲಾದ ಪದ್ಧತಿಯ ವಿರುದ್ಧವಾಗಿ ಸರ್ಕಾರ ನಡೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT