ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8ನೇ ಪರಿಚ್ಛೇದಕ್ಕೆ ತುಳು ಸೇರ್ಪಡೆಗೆ ಮನವಿ

Last Updated 31 ಆಗಸ್ಟ್ 2016, 19:30 IST
ಅಕ್ಷರ ಗಾತ್ರ

ನವದೆಹಲಿ: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಆಗ್ರಹಿಸಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವ ರಾಜನಾಥ ಸಿಂಗ್ ಅವರಿಗೆ ಬುಧವಾರ ಮನವಿ ಸಲ್ಲಿಸಿದೆ.

ತುಳು ಭಾಷೆಯು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಯಾಗುವ ಎಲ್ಲ ಅರ್ಹತೆ ಹೊಂದಿದೆ ಎಂದು ಪ್ರಧಾನಿಯವರಿಗೆ ತಿಳಿಸಿದ ನಿಯೋಗವು, ಅದರ ಅಗತ್ಯದ ಕುರಿತೂ ಮನವರಿಕೆ ಮಾಡಿತು.

ತುಳು ಕುರಿತು ವಿವರ ಪಡೆದ ಮೋದಿ ಹಾಗೂ ರಾಜನಾಥ ಸಿಂಗ್‌, ಸಕಾರಾತ್ಮಕವಾಗಿ ಸ್ಪಂದಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಎಂ.ಜಾನಕಿ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಬಿ.ಸುಬ್ಬಯ್ಯ ರೈ, ಡಿ.ಸುರೇಂದ್ರಕುಮಾರ್, ಡಾ.ವಾಮನ ನಂದಾವರ, ಉಮಾನಾಥ ಕೋಟ್ಯಾನ್, ಎ.ಸಿ. ಭಂಡಾರಿ, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಸಿ.ಎಂ. ನಾಗರಾಜ, ತುಳು ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT