ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ಕೊಳ್ಳದ 4 ಜಲಾಶಯಗಳ ನೀರು ಕುಡಿಯಲು ಮಾತ್ರ

ವಿಶೇಷ ಅಧಿವೇಶನ
Last Updated 23 ಸೆಪ್ಟೆಂಬರ್ 2016, 12:54 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ ಕೊಳ್ಳದ ಕೆಆರ್‌ಎಸ್‌, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಲು ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಯಿತು.

ಮಧ್ಯಾಹ್ನ 12.50ಕ್ಕೆ ವಿಧಾನಮಂಡಲ ಕಲಾಪ ಆರಂಭವಾಯಿತು. ಅಗಲಿದ ರಾಜಕೀಯ ಮುಖಂಡರು ಹಾಗೂ ಹುತಾತ್ಮ ಯೋಧರಿಗೆ ಉಭಯ ಸದನಗಳಲ್ಲಿ ಸಂತಾಪ ಸೂಚಿಸಲಾಯಿತು.

ವಿಧಾನ ಪರಿಷತ್‌ನಲ್ಲಿ ಮೊದಲಿಗೆ ನಿರ್ಣಯ ಮಂಡಿಸಲಾಯಿತು. ಪರಿಷತ್‌ನಲ್ಲಿ ಎ. ರವಿ ನಿರ್ಣಯ ಮಂಡಿಸಿದರು. ಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ನಿರ್ಣಯ ಅನುಮೋದಿಸಿದರು.

ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಜಗದೀಶ ಶೆಟ್ಟರ್‌ ನಿರ್ಣಯ ಮಂಡಿಸಿದರು. ಜೆಡಿಎಸ್‌ನ ವೈ.ಎಸ್‌.ವಿ. ದತ್ತ ನಿರ್ಣಯ ಅನುಮೋದಿಸಿದರು.

‘ಕೆಆರ್‌ಎಸ್‌, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳಲ್ಲಿ ಸದ್ಯ ನೀರಿಲ್ಲ. ಸದ್ಯದ ಪರಿಸ್ಥಿತಿ ಗಂಭೀರವಾಗಿದೆ. ನಾಡಿನಲ್ಲಿ ಕುಡಿಯುವ ನೀರಿಗೂ ತತ್ವಾರ ಬಂದಿದೆ’ ಎಂದು ಜಗದೀಶ ಶೆಟ್ಟರ್‌ ಹೇಳಿದರು.

‘ಕಾವೇರಿ ಕೊಳ್ಳದಲ್ಲಿ ನೀರಿನ ತೀವ್ರ ತೊಂದರೆ ಇದೆ. ಬೆಂಗಳೂರಿನ ಕುಡಿಯುವ ನೀರಿಗೂ ತೀವ್ರ ಸಮಸ್ಯೆ ಇದೆ. ಹೀಗಾಗಿ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಿಕೊಳ್ಳಲಾಗುವುದು’ ಎಂದರು.

‘ಕಾವೇರಿ ಕೊಳ್ಳದ ಕೆಆರ್‌ಎಸ್‌, ಹೇಮಾವತಿ, ಹಾರಂಗಿ, ಕಬಿನಿ ಜಲಾಶಯಗಳಲ್ಲಿ ಒಟ್ಟು 27.6 ಟಿಎಂಸಿಯಷ್ಟು ಮಾತ್ರ ನೀರಿದೆ. ಇದು ರಾಜ್ಯದ ಸಂಕಷ್ಟ ಸ್ಥಿತಿ’ ಎಂದು ಜೆಡಿಎಸ್‌ನ ವೈ.ಎಸ್‌.ವಿ. ದತ್ತ ಹೇಳಿದರು.

ಅಂಬರೀಷ್‌, ಶ್ರೀನಿವಾಸ ಪ್ರಸಾದ್‌ ಗೈರು
ವಿಶೇಷ ಅಧಿವೇಶನಕ್ಕೆ ಕಾಂಗ್ರೆಸ್‌ ಶಾಸಕರಾದ ಅಂಬರೀಷ್‌ ಮತ್ತು ಶ್ರೀನಿವಾಸ ಪ್ರಸಾದ್‌ ಗೈರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT