ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೂಡ್ಸ್‌ ವಾಹನ ಪಲ್ಟಿ: ಒಬ್ಬ ಸಾವು, ಒಂಬತ್ತು ಮಂದಿಗೆ ಗಾಯ

Last Updated 25 ಸೆಪ್ಟೆಂಬರ್ 2016, 19:55 IST
ಅಕ್ಷರ ಗಾತ್ರ

ಬೆಂಗಳೂರು: ತಲಘಟ್ಟಪುರ ಸಮೀಪದ ನೈಸ್‌ ರಸ್ತೆಯಲ್ಲಿ ಭಾನುವಾರ ಮಿನಿ ಗೂಡ್ಸ್‌ ವಾಹನ ಉರುಳಿ ಬಿದ್ದಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

‘ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಉಳಿದಂತೆ  ಶಿವಕುಮಾರ್‌ (30), ಭೀಮರಾಜು, ವೆಂಕಟರಾಮಣ್ಣ, ಅಬ್ದುಲ್‌, ಶೋಭಾ, ಭಾನುಪ್ರಕಾಶ್ ಸೇರಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೆಲ್ಲ ಕಾರ್ಮಿಕರು ಎಂಬುದು ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಮಧ್ಯಾಹ್ನ 3.30ರ ಸುಮಾರಿಗೆ ಕಾರ್ಮಿಕರೆಲ್ಲರೂ ಗೂಡ್ಸ್‌ ವಾಹನದಲ್ಲಿ ಬೆಂಗಳೂರಿನತ್ತ ಬರುತ್ತಿದ್ದರು. ಕೆಲವರು ವಾಹನದ ಕ್ಯಾರಿಯರ್‌ ಭಾಗದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಾಹನದ ಹಿಂಬದಿ ಚಕ್ರವು ಪಂಕ್ಚರ್‌ ಆಗಿತ್ತು. ಆಗ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನವೂ ರಸ್ತೆಯಲ್ಲಿ ಎರಡ್ಮೂರು ಬಾರಿ ಪಲ್ಟಿಯಾಗಿದೆ’.

‘ಈ ವೇಳೆ ವಾಹನದ ಮೇಲ್ಭಾಗದಲ್ಲಿ ಕುಳಿತಿದ್ದ ಕಾರ್ಮಿಕರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ವಾಹನದ ಒಳಗಿದ್ದ ವ್ಯಕ್ತಿಯು ತೀವ್ರ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ. ಚಾಲಕ ಸಹ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ತಿಳಿಸಿದರು. 

‘ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂಬುದು ಗೊತ್ತಾಗಿದೆ. ಚಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಬಳಿಕ ಆತನ ಹೇಳಿಕೆ ಪಡೆಯಲಾಗುವುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT