ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಪ್ಪನ ಬೆಟ್ಟಕ್ಕೆ ಸಿ.ಎಂ ಭೇಟಿ ಇಂದು

ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ: 100 ಅಡಿ ಪ್ರತಿಮೆ ಸ್ಥಾಪನೆ ಘೋಷಣೆ
Last Updated 26 ಸೆಪ್ಟೆಂಬರ್ 2016, 10:55 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಕೈಗೊಳ್ಳಲಿರುವ ಒಳಚರಂಡಿ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಉದ್ಘಾಟನಾ ಕಾರ್ಯಕ್ರಮವು ಸೆ. 26ರಂದು ಬೆಳಿಗ್ಗೆ 10.30ಗಂಟೆಗೆ ಮಲೆಮಹದೇಶ್ವರ ಬೆಟ್ಟದ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಲಿದೆ.

ಸಾಲೂರು ಮಠದ ಪಟ್ಟದ ಗುರು ಸ್ವಾಮೀಜಿ ನೇತೃತ್ವವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾ ನ್ಯಾಸ ಹಾಗೂ ಉದ್ಘಾಟನೆ ನೆರವೇರಿಸು ವರು. ಸಹಕಾರ ಮತ್ತು ಸಕ್ಕರೆ ಸಚಿವ ಎಚ್.ಎಸ್. ಮಹದೇವಪ್ರಸಾದ್ ಜ್ಯೋತಿ ಬೆಳಗಿಸುವರು. ಶಾಸಕ ಆರ್‌. ನರೇಂದ್ರ ಅಧ್ಯಕ್ಷತೆವಹಿಸಲಿದ್ದಾರೆ.

ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ನಗರಾಭಿ ವೃದ್ಧಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ರೋಷನ್ ಬೇಗ್, ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ, ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ರಾಮಚಂದ್ರ, ಸಂಸದ ಆರ್. ಧ್ರುವನಾರಾಯಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಶಾಸಕರಾದ ಎಸ್. ಜಯಣ್ಣ, ಕೆ.ಟಿ. ಶ್ರೀಕಂಠೇಗೌಡ, ಸಂದೇಶ್ ನಾಗರಾಜು, ಆರ್. ಧರ್ಮಸೇನ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಸ್. ಬಸವರಾಜು, ಕೊಳ್ಳೇ ಗಾಲ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಸ್. ರಾಜು, ಉಪಾಧ್ಯಕ್ಷೆ ಲತಾ ರಾಜಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಇರ್ಷಾದ್ ಬಾನು, ತಾಲ್ಲೂಕು ಪಂಚಾ ಯಿತಿ ಸದಸ್ಯರಾದ ಹಲಗ ತಂಬಡಿ, ಮಹದೇಶ್ವರ ಬೆಟ್ಟದ ಗ್ರಾಮ ಪಂಚಾ ಯಿತಿ ಅಧ್ಯಕ್ಷೆ ರುಕ್ಮಿಣಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕಾಮಗಾರಿ ವಿವರ:   ಮಲೆಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಅವರಿಂದ ನೆರವೇರಲಿರುವ ಅಭಿವೃದ್ಧಿ ಕಾಮಗಾರಿ ಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾಮಗಾರಿಗಳ ವಿವರ.

₹ 2,710 ಲಕ್ಷ ವೆಚ್ಚದಡಿ ಮಹದೇಶ್ವರಸ್ವಾಮಿ ಕ್ಷೇತ್ರದ ಸಮಗ್ರ ಒಳಚರಂಡಿ ಯೋಜನೆ ಕಾಮಗಾರಿ, ₹ 427.60 ಲಕ್ಷ ವೆಚ್ಚದಡಿ ಅಂತರ ಗಂಗೆ ಯಲ್ಲಿ ಕಲ್ಯಾಣಿ ನಿರ್ಮಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿ, ₹ 476 ಲಕ್ಷ ವೆಚ್ಚದಡಿ ದೇವಸ್ಥಾನದ ಮುಂಭಾಗದ ಬಯಲು ರಂಗ ಮಂದಿರ ಆವರಣದಲ್ಲಿ ಭಕ್ತರಿಗೆ ತಂಗಲು ಶೆಡ್ ನಿಮಾಣ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ.

₹ 486 ಲಕ್ಷ ವೆಚ್ಚದಡಿ 12 ಕೊಠಡಿಗಳ ಡಾರ್ಮೆಟರಿ ನಿರ್ಮಣ ಕಾಮಗಾರಿ, ₹ 330 ಲಕ್ಷ ವೆಚ್ಚದ ಪ್ರಾಧಿಕಾರದ ನೌಕರರಿಗೆ ವಸತಿಗೃಹ ನಿರ್ಮಾಣ, ₹ 100 ಲಕ್ಷ ವೆಚ್ಚದಡಿ ಬಸ್‌ನಿಲ್ದಾಣದ ಆವರಣದಲ್ಲಿ 72 ಸಂಖ್ಯೆಯ ಅಂಗಡಿ ಮಳಿಗೆಗಳ ನಿರ್ಮಾಣ ಮತ್ತು ಶ್ರೀಕ್ಷೇತ್ರದ ಆವರಣದಲ್ಲಿ ಒಂದು ಆಧುನಿಕ ಸುಸಜ್ಜಿತ ಉಪಹಾರ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುತ್ತದೆ.

₹ 56 ಲಕ್ಷ ವೆಚ್ಚದಡಿ ನಿರ್ಮಿಸಿರುವ ಶೂನ್ಯ ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ₹ 51 ಲಕ್ಷ ವೆಚ್ಚದಡಿ ವಸತಿ ಗೃಹಗಳ ಬಟ್ಟೆಗಳನ್ನು ಯಂತ್ರಗಳಿಂದ ಶುಚಿಗೊಳಿಸುವ ಘಟಕದ ಉದ್ಘಾಟನೆ ನೆರವೇರಿಸಲಿದ್ದಾರೆ. ಇದೇ ವೇಳೆ ಶ್ರೀಕ್ಷೇತ್ರದ ದೀಪಗಿರಿ ವಡ್ಡುವಿನಲ್ಲಿ 100 ಅಡಿ ಎತ್ತರದ ಮಹದೇಶ್ವರರ ವಿಗ್ರಹ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಅವರು ಘೋಷಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT