ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ: ನಾರಾಯಣಸ್ವಾಮಿ ಅಧ್ಯಕ್ಷ, ಗಿರಿಜಮ್ಮ ಉಪಾಧ್ಯಕ್ಷೆ

Last Updated 26 ಸೆಪ್ಟೆಂಬರ್ 2016, 19:30 IST
ಅಕ್ಷರ ಗಾತ್ರ

ಹೊಸಕೋಟೆ: ಇಲ್ಲಿನ ನಗರ ಸಭೆಯ ಅಧ್ಯಕ್ಷರಾಗಿ ಕಾಂಗ್ರೆಸ್‌ನ  ಬಿ.ನಾರಾಯಣಸ್ವಾಮಿ  ಮತ್ತು ಉಪಾಧ್ಯಕ್ಷರಾಗಿ ಗಿರಿಜಮ್ಮ ಆಯ್ಕೆಯಾಗಿದ್ದಾರೆ.

ಸೋಮವಾರ ನಡೆದ ಚುನಾವಣೆಯಲ್ಲಿ  ನಾರಾಯಣಸ್ವಾಮಿ  ಅವರಿಗೆ 15, ಪ್ರತಿಸ್ಫರ್ಧಿಯಾಗಿದ್ದ ಬಿಜೆಪಿಯ ಎಂ.ನಾಗರಾಜ್ ಅವರಿಗೆ 10 ಮತಗಳು ಲಭಿಸಿದವು. ಉಪಾಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಿದ್ದ ಗಿರಿಜಮ್ಮ   15   ಹಾಗೂ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ರಾಧಾ ವೆಂಕಟೇಶ್  10 ಮತ ಗಳಿಸಿದರು. 

ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಗುಂಪಿಗೆ ಮೀಸಲಾಗಿತ್ತು.  ನಗರಸಭೆಯಲ್ಲಿ ಕಾಂಗ್ರೆಸ್‌ನ 13 ಮತ್ತು ಬಿಜೆಪಿಯ 10 ಸದಸ್ಯರಿದ್ದಾರೆ.

ಶಾಸಕ ಎನ್.ನಾಗರಾಜು ಮತ್ತು ಸಂಸದ ವೀರಪ್ಪ ಮೊಯಿಲಿ ಮತ ಚಲಾಯಿಸಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗಳು 15 ಮತ ಪಡೆಯುವಂತಾಯಿತು. ನಾರಾಯಣಸ್ವಾಮಿ ಅವರು ಅಧ್ಯಕ್ಷರಾಗುತ್ತಿರುವುದು ಇದು ಎರಡನೇ ಬಾರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT