ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುತ್ತಿರುವ ವಾಯುಮಾಲಿನ್ಯ

ವಿಶ್ವ ಆರೋಗ್ಯ ಸಂಸ್ಥೆ ಕಳವಳ: ಕ್ರಮಕ್ಕೆ ಸಲಹೆ
Last Updated 27 ಸೆಪ್ಟೆಂಬರ್ 2016, 19:30 IST
ಅಕ್ಷರ ಗಾತ್ರ

ಜಿನೀವಾ (ಎಎಫ್‌ಪಿ): ವಿಶ್ವದ ಪ್ರತಿ 10ರಲ್ಲಿ 9 ಜನ ಮಲಿನ ವಾಯು ಸೇವಿಸುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಕಳವಳ ವ್ಯಕ್ತಪಡಿಸಿದೆ. ಈ ಕುರಿತು ವರದಿ ಬಿಡುಗಡೆ ಮಾಡಿರುವ ಸಂಸ್ಥೆ, ವಾಯುಮಾಲಿನ್ಯ ತಡೆಯಲು ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಕರೆ ನೀಡಿದೆ.

ವಾಯುಮಾಲಿನ್ಯಕ್ಕೆ ಸಂಬಂಧಿಸಿದ ಅಂಕಿಅಂಶಗಳು ಕಳವಳಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ವಿಭಾಗದ ಮುಖ್ಯಸ್ಥೆ ಮರಿಯಾ ನೈರಾ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ದೇಶಗಳಿಗಿಂತ ಬಡ ರಾಷ್ಟ್ರಗಳಲ್ಲೇ ವಾಯುಮಾಲಿನ್ಯದ ಪ್ರಮಾಣ ಹೆಚ್ಚಿದೆ. ಆದರೂ ವಿಶ್ವದ ಎಲ್ಲ ರಾಷ್ಟ್ರಗಳು ಸಮಸ್ಯೆ ಎದುರಿಸುತ್ತಿವೆ. ಇದು ಸಾರ್ವಜನಿಕ ಆರೋಗ್ಯ ಕ್ಷೇತ್ರದ ತುರ್ತು ಪರಿಸ್ಥಿತಿ ಎಂದು ಅವರು ಹೇಳಿದ್ದಾರೆ.

ವಾಯುಮಾಲಿನ್ಯದಿಂದ ಸಂಭವಿಸುವ ಶೇ. 90ರಷ್ಟು ಮರಣ  ಪ್ರಮಾಣ ಕಡಿಮೆ ಹಾಗೂ ಮಧ್ಯಮ ಆದಾಯ ಹೊಂದಿರುವ ರಾಷ್ಟ್ರಗಳಲ್ಲೇ ದಾಖಲಾಗಿದೆ ಎಂಬುದೂ ವರದಿಯಿಂದ ತಿಳಿದುಬಂದಿದೆ.

ನಗರಪ್ರದೇಶಗಳಲ್ಲೇ ವಾಯುಮಾಲಿನ್ಯದ ಸಮಸ್ಯೆ ಹೆಚ್ಚು. ಆದರೆ, ಗ್ರಾಮೀಣ ಪ್ರದೇಶಗಳಲ್ಲೂ ನಾವೆಣಿಸಿದ್ದಕ್ಕಿಂತ ಹೆಚ್ಚು ಮಾಲಿನ್ಯ ಇದೆ ಎಂದು ಡಬ್ಲ್ಯುಎಚ್‌ಒ ತಜ್ಞರು ತಿಳಿಸಿದ್ದಾರೆ.

ವಿಶ್ವದ 3,000ಕ್ಕೂ ಹೆಚ್ಚು ನಗರಗಳಿಂದ ಸಂಗ್ರಹಿಸಲಾದ ಅಂಕಿಅಂಶಗಳ ಆಧಾರದಲ್ಲಿ ಈ ವರದಿ ಸಿದ್ಧಪಡಿಸಲಾಗಿದೆ. ವಿಶ್ವದ ಶೇ. 92ರಷ್ಟು ಜನ ಸಂಸ್ಥೆ ನಿಗದಿಪಡಿಸಿರುವುದಕ್ಕಿಂತಲೂ ಕಡಿಮೆ ಗುಣಮಟ್ಟದ ಗಾಳಿ ಸೇವಿಸುತ್ತಿದ್ದಾರೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.

2.5 ಮೈಕ್ರೋಮೀಟರ್‌ಗಳಿಗಿಂತ ಕಡಿಮೆ ಗುಣಮಟ್ಟದ ಗಾಳಿಯಲ್ಲಿ ಸಲ್ಫೇಟ್ ಮತ್ತು ಕಪ್ಪು ಇಂಗಾಲದಂಥ ವಿಷಾಂಶಗಳಿರುತ್ತವೆ. ಇದರಿಂದ ಶ್ವಾಸಕೋಶ ಮತ್ತು ಹೃದಯದ ವ್ಯವಸ್ಥೆಗೆ ಹಾನಿಯಾಗುತ್ತದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT