ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜಂ ಖಾನ್‌ಗೆ ನೋಟಿಸ್‌ ಜಾರಿಗೆ ‘ಸುಪ್ರೀಂ’ ಸೂಚನೆ

Last Updated 27 ಸೆಪ್ಟೆಂಬರ್ 2016, 19:30 IST
ಅಕ್ಷರ ಗಾತ್ರ

ನವದೆಹಲಿ: ಬುಲಂದ್‌ಶಹರ್‌ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಸಚಿವ ಅಜಂ ಖಾನ್‌ ವಿಚಾರಣೆಗೆ ಗೈರುಹಾಜರಾಗಿರುವುದಕ್ಕೆ  ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಅಜಂ ಖಾನ್‌ ಅವರಿಗೆ ಹೊಸದಾಗಿ ನೋಟಿಸ್‌ ಜಾರಿಗೊಳಿಸುವಂತೆಯೂ ನ್ಯಾಯಾಲಯ ಸಿಬಿಐಗೆ ಸೂಚಿಸಿದೆ. ‘ಅಜಂ ಖಾನ್‌ ವಿರುದ್ಧ ನೇರವಾದ ಆರೋಪಗಳು ಇರುವುದರಿಂದ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿತ್ತು. ಹೀಗಾಗಿ ಖಾನ್‌ ಅವರಿಗೆ ನೋಟಿಸ್‌ ಜಾರಿಗೊಳಿಸಬೇಕು’ ಎಂದು ದೀಪಕ್‌ ಮಿಶ್ರಾ ಅವರನ್ನೊಳಗೊಂಡ ಪೀಠ ತಿಳಿಸಿತು.

ಖಾನ್‌ ಅವರಿಗೆ ನೋಟಿಸ್‌ ಸಲ್ಲಿಸಲು ಅನುಕೂಲವಾಗುವಂತೆ ಈ ಪ್ರಕರಣಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಸಿಬಿಐಗೆ ನೀಡುವಂತೆ ರಿಜಿಸ್ಟ್ರಾರ್‌ ಅವರಿಗೆ ನ್ಯಾಯಾಲಯ ಸೂಚಿಸಿತು.

ಖಾನ್‌ ಅವರು ಸಚಿವ ಸಂಪುಟದ ಸದಸ್ಯರಾಗಿರುವುದರಿಂದ ಉತ್ತರ ಪ್ರದೇಶ ಸರ್ಕಾರದ ಮೂಲಕ ಅವರಿಗೆ ನೋಟಿಸ್‌ ಜಾರಿಗೊಳಿಸಬೇಕು ಎಂದು ಸಿಬಿಐ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಮಣಿಂದರ್‌ ಸಿಂಗ್‌ ಅಭಿಪ್ರಾಯಪಟ್ಟರು. ಆಗ ನ್ಯಾಯಮೂರ್ತಿಗಳು ‘ಖಾನ್‌ ಅವರು ತಮ್ಮ ವೈಯಕ್ತಿಕ ಸಾಮರ್ಥ್ಯದ ಮೇಲೆ ಹೇಳಿಕೆ ನೀಡಿರಬಹುದು’ ಎಂದು  ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT