ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ವಿವಾದ: ಸೆ.30ರವರೆಗೆ ನಿಷೇಧಾಜ್ಞೆ

Last Updated 27 ಸೆಪ್ಟೆಂಬರ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ ವಿವಾದ ಸಂಬಂಧ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಕೈಗೊಂಡಿರುವ ಭದ್ರತೆಯನ್ನು ಸೆ.30ರವರೆಗೆ ಮುಂದುವರಿಸಲು ಪೊಲೀಸರು ನಿರ್ಧರಿಸಿದ್ದಾರೆ.

‘ನೀರು ಹಂಚಿಕೆ ವಿಚಾರವಾಗಿ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇದ್ದುದರಿಂದ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಜತೆಗೆ ಇಂಡೊ–ಟೆಬೆಟ್ ಬಾರ್ಡರ್ ಪೊಲೀಸ್ (ಐಟಿಬಿಪಿ), ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್), ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೇರಿದಂತೆ ಕೇಂದ್ರದ 15 ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಮಂಗಳವಾರ ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ. ಸೆ.30ರವರೆಗೆ ಇದೇ ಭದ್ರತೆ ಇರುತ್ತದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

‘ಸೆ.12ರಂದು ಗಲಭೆ ತೀವ್ರಗೊಂಡಿದ್ದ ಪ್ರದೇಶಗಳಾದ ಬ್ಯಾಟರಾಯನಪುರ, ರಾಜರಾಜೇಶ್ವರಿ ನಗರ, ರಾಜಗೋಪಾಲ ನಗರ, ಲಗ್ಗೆರೆ, ಪೀಣ್ಯ ಹಾಗೂ ಯಶವಂತಪುರ ಭಾಗಗಳಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT