ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ: ವಿಶ್ವ ಬ್ಯಾಂಕ್ ಮೊರೆ ಹೋದ ಪಾಕ್

Last Updated 28 ಸೆಪ್ಟೆಂಬರ್ 2016, 9:22 IST
ಅಕ್ಷರ ಗಾತ್ರ

ನವದೆಹಲಿ :ನೀರು ಮತ್ತು ರಕ್ತ ಜತೆಯಾಗಿ ಹರಿಯದು ಎಂದು ಹೇಳುವ ಮೂಲಕ ಪಾಕಿಸ್ತಾನ ಜತೆಗಿನ 1960ರ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ಪುನರ್‌ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾದ ಕಾರಣ ಪಾಕಿಸ್ತಾನ ಇದೀಗ ಈ ಒಪ್ಪಂದ ಕುದುರಿಸಿದ್ದ ವಿಶ್ವ ಬ್ಯಾಂಕ್‍ನ್ನು ಸಂಪರ್ಕಿಸಿದೆ.

ಬಲ್ಲಮೂಲಗಳ ಪ್ರಕಾರ ಇದೇ ವಿಚಾರಕ್ಕೆ ಸಂಬಂಧಿಸಿ ಪಾಕ್  ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಲೇರಿದೆ ಎನ್ನಲಾಗುತ್ತಿದೆ.

56 ವರ್ಷಗಳ ಹಿಂದೆ ಸಹಿ ಹಾಕಲ್ಪಟ್ಟಿದ್ದ ಸಿಂಧೂ ನದಿ ನೀರು ಒಪ್ಪಂದ ಭಾರತ ಮತ್ತು ಪಾಕಿಸ್ತಾನದಲ್ಲಿ ಹರಿಯುವ ಆರು ನದಿಗಳ ನೀರು ಹಂಚಿಕೆಯನ್ನು ನಿಯಂತ್ರಿಸುತ್ತಿದೆ. ಸಿಂಧೂ ನದಿ ನೀರು ಒಪ್ಪಂದ ಪುನರ್‌ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೋದಿ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲು ಪಾಕಿಸ್ತಾನದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ನೀರು ಹಂಚಿಕೆ ಒಪ್ಪಂದವನ್ನು ಪ್ರಧಾನಿ ಮರುಪರಿಶೀಲಿಸಲು ನಿರ್ಧರಿಸಿದ್ದರು.
 

ಜಿಯೋ ನ್ಯೂಸ್‌ ವರದಿಯ ಪ್ರಕಾರ ಪಾಕಿಸ್ತಾನದ ಉನ್ನತ ನ್ಯಾಯವಾದಿ, ಅಟಾರ್ನಿ ಜನರಲ್‌ ಅಷ್‌ತರ್‌ ಔಸಾಫ್ ಅಲಿ ಅವರು ವಾಷಿಂಗ್ಟನ್‌ನಲ್ಲಿನ  ವಿಶ್ವ ಬ್ಯಾಂಕಿನ ಹಿರಿಯ ಅಧಿಕಾರಿಗಳು ಭೇಟಿಯಾಗಿದ್ದಾರೆ.

ಪಾಕ್‌ ಪ್ರಧಾನಿ ನವಾಜ್‌ ಷರೀಫ್ ಅವರಿಗೆ ವಿದೇಶ ವ್ಯವಹಾರಗಳ ಸಲಹೆಗಾರರಾಗಿರುವ ಸರ್ತಾಜ್‌ ಅಜೀಜ್‌ ಅವರು "ಒಂದು ವೇಳೆ ಭಾರತ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ರದ್ದು ಪಡಿಸಿದರೆ ಆ ಕೃತ್ಯವು ಪಾಕ್‌ ವಿರುದ್ಧ ಯುದ್ಧದ ಕೃತ್ಯ'ವಾಗುವುದೆಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT