ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ದೇವನೂರ ಆಯ್ಕೆ

Last Updated 5 ಅಕ್ಟೋಬರ್ 2016, 19:50 IST
ಅಕ್ಷರ ಗಾತ್ರ

ನವದೆಹಲಿ: ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಪ್ರಸಕ್ತ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಸಾಹಿತಿ ದೇವನೂರ ಮಹಾದೇವ ಆಯ್ಕೆಯಾಗಿದ್ದಾರೆ.

ಹಿಂದಿ ಲೇಖಕ ಗಂಗಾಪ್ರಸಾದ್‌ ಬಿಮಲ್‌, ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಭಾರತೀಯ ಭಾಷಾ ಕೇಂದ್ರದ ಅಧ್ಯಕ್ಷ ಪ್ರೊ. ಅನ್ವರ್‌ ಪಾಶಾ, ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ, ಮಧ್ಯಪ್ರದೇಶದ ಅಮರಕಂಟಕದಲ್ಲಿರುವ ಇಂದಿರಾಗಾಂಧಿ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ವಿ. ಕಟ್ಟೀಮನಿ ಅವರನ್ನು ಒಳಗೊಂಡ ಸಮಿತಿಯು ದೇವನೂರ ಮಹಾದೇವ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿತು.

ಪ್ರಶಸ್ತಿಯು ₹ 5 ಲಕ್ಷ ನಗದು, ಫಲಕ ಒಳಗೊಂಡಿದೆ. ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವಾದ ಡಿ.29ರಂದು ಕುಪ್ಪಳಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡ ಲಾಗುವುದು. ಪ್ರಶಸ್ತಿ ಸ್ವೀಕರಿಸಲು ಮಹಾದೇವ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಹಂ.ಪ. ನಾಗರಾಜಯ್ಯ, ಕಾರ್ಯದರ್ಶಿ ಕಡಿದಾಳ್‌ ಪ್ರಕಾಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT