ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಲಾಂತರಿ ಸಾಸಿವೆಗೆ ‘ಸುಪ್ರೀಂ’ ತಡೆ

Last Updated 8 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ನವದೆಹಲಿ : ಕುಲಾಂತರಿ ಸಾಸಿವೆಯನ್ನು ವಾಣಿಜ್ಯ ಉದ್ದೇಶಕ್ಕೆ ಬಿಡುಗಡೆ ಮಾಡುವುದಕ್ಕೆ ಸುಪ್ರೀಂಕೋರ್ಟ್‌ 10 ದಿನಗಳವರೆಗೆ ತಡೆಯಾಜ್ಞೆ ನೀಡಿದೆ.

ಕುಲಾಂತರಿ ಸಾಸಿವೆಯನ್ನು ಬಿತ್ತನೆ ಉದ್ದೇಶಕ್ಕೆ ಬಿಡುಗಡೆ ಮಾಡುವ ಮೊದಲು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಬೇಕು ಎಂದು ಕೋರ್ಟ್‌, ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. ‘ಈ ತಿಂಗಳ 17ರವರೆಗೆ ಕುಲಾಂತರಿ ಸಾಸಿವೆಯನ್ನು ವಾಣಿಜ್ಯ ಉದ್ದೇಶಕ್ಕೆ ಬಿಡುಗಡೆ ಮಾಡಬಾರದು.

ಅಂದು  (ಅ. 17) ಕೋರ್ಟ್‌ ಈ ಪ್ರಕರಣವನ್ನು ವಿವರವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ’ ಎಂದು ಮುಖ್ಯನ್ಯಾಯಮೂರ್ತಿ ಟಿ. ಎಸ್‌. ಠಾಕೂರ್‌ ಮತ್ತು ನ್ಯಾಯಮೂರ್ತಿ ಎ. ಎಂ ಖನ್ವಿಲ್ಕರ್‌ ಅವರಿದ್ದ ಪೀಠವು ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT