ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ

Last Updated 20 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಲಿಪಿಕ ನೌಕರರ ಬೇಡಿಕೆಗಳನ್ನು ತಿಂಗಳಿನಲ್ಲಿ  ಈಡೇರಿಸದಿದ್ದರೆ  ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಇಲಾಖೆಯ ಲಿಪಿಕಾರರ ಸಂಘದ ಅಧ್ಯಕ್ಷ ಎಂ.ಸಿ.ಕೆಂಪರಾಜು ಎಚ್ಚರಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೇಡಿಕೆಗಳ ಬಗ್ಗೆ ಇಲಾಖೆಯ ಮುಖ್ಯಸ್ಥರಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಅವುಗಳಿಗೆ ಸ್ಪಂದನೆ ಮಾತ್ರ ಸಿಕ್ಕಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಉಪನಿರ್ದೇಶಕರ ಕಚೇರಿಗಳಲ್ಲಿ ಪತ್ರಾಂಕಿತ ಸಹಾಯಕರ ಹುದ್ದೆಗಳನ್ನು ಮಂಜೂರು ಮಾಡಬೇಕು. ರಾಜ್ಯ ಲೆಕ್ಕಪತ್ರ ಇಲಾಖೆಗೆ ಭರ್ತಿ ಮಾಡಿಕೊಳ್ಳುತ್ತಿರುವ 716 ಹುದ್ದೆಗಳ ಪೈಕಿ 274 ಹುದ್ದೆಗಳನ್ನು ಸಾರ್ವಜನಿಕ  ಶಿಕ್ಷಣ ಇಲಾಖೆಗೆ ನೀಡಬೇಕು’.

‘ನೌಕರರಿಗೆ ಬಡ್ತಿ ನೀಡಬೇಕು. ಒತ್ತಡ ನಿವಾರಣೆಗಾಗಿ ಕಾರ್ಯಭಾರ ರಚನಾ ಸಮಿತಿ ರಚಿಸಬೇಕು. ಅಕ್ಷರ ದಾಸೋಹ ಕಾರ್ಯಕ್ರಮದ ಅಧಿಕಾರಿ ಹುದ್ದೆಗಳನ್ನು ಲಿಪಿಕ ನೌಕರರ ವರ್ಗಕ್ಕೆ ನೀಡಬೇಕು’ ಎಂದು ಅವರು ಒತ್ತಾಯಿಸಿದರು.

ಮುಖ್ಯಾಂಶಗಳು
* ನೌಕರರ ಬೇಡಿಕೆಗಳಿಗೆ ಸ್ವಂದನೆ ಸಿಗುತ್ತಿಲ್ಲ

* ಪತ್ರಾಂಕಿತ ಸಹಾಯಕರ ಹುದ್ದೆ ಮಂಜೂರಿಗೆ ಒತ್ತಾಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT